ಆರೋಗ್ಯ ಉಪಕೇಂದ್ರ ಕಾಮಗಾರಿ ಸ್ಥಗಿತಗೊಳಿಸಿ

ಮಂಗಲ ಗ್ರಾಮದಲ್ಲಿ ಕೈಗೊಂಡಿರುವ ಆರೋಗ್ಯ ಉಪ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಶಾಸಕ ಎಂ.ಆರ್.ಮಂಜುನಾಥ್ ವೀಕ್ಷಿಸಿದರು. ಉದ್ದನೂರು ಪ್ರಸಾದ್, ಮಂಜೇಶ್, ಮಲ್ಲಿಕಾರ್ಜುನ, ಮಹದೇವ ಇತರರಿದ್ದರು.
ಮಂಗಲ ಗ್ರಾಮದಲ್ಲಿ ಕೈಗೊಂಡಿರುವ ಆರೋಗ್ಯ ಉಪ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಶಾಸಕ ಎಂ.ಆರ್.ಮಂಜುನಾಥ್ ವೀಕ್ಷಿಸಿದರು. ಉದ್ದನೂರು ಪ್ರಸಾದ್, ಮಂಜೇಶ್, ಮಲ್ಲಿಕಾರ್ಜುನ, ಮಹದೇವ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗಮನಕ್ಕೆ ಬಾರದೆ ಕೆಲಸ ಆರಂಭಿಸಿರುವುದು ಸರಿಯಲ್ಲ
  • ಶಾಸಕ ಎಂ.ಆರ್.ಮಂಜುನಾಥ್ ಬೇಸರ
  • ಕ್ರಿಯಾ ಯೋಜನೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ

ಹನೂರು:

ತಾಲೂಕಿನ ಮಂಗಲ ಗ್ರಾಮದಲ್ಲಿ ಗಮನಕ್ಕೆ ಬಾರದೆ ಇತ್ತೀಚೆಗೆ ಆರಂಭವಾಗಿರುವ ಆರೋಗ್ಯ ಉಪ ಕೇಂದ್ರದ ಕಟ್ಟಡ ಕಾಮಗಾರಿ ಬಗ್ಗೆ ಶಾಸಕ ಎಂ.ಆರ್.ಮಂಜುನಾಥ್ ಬೇಸರ ವ್ಯಕ್ತಪಡಿಸಿದರು.

ಜನರ ಸಮಸ್ಯೆ ಆಲಿಸಲು ಭಾನುವಾರ ಶಾಸಕರು ಮಂಗಲ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಕೆರೆ ಅಭಿವೃದ್ಧಿ, ರಸ್ತೆ ನಿರ್ಮಿಸಿಕೊಡುವಂತೆ ಹಾಗೂ ಗ್ರಾಮದಲ್ಲಿ ಸ್ವಚ್ಛತೆ ಇಲ್ಲದಿರುವ ಬಗ್ಗೆ ಗಮನಕ್ಕೆ ತಂದರು. ಬಳಿಕ ಶಾಸಕರು ಕೆರೆ ಬಳಿ ತೆರಳಿ ವಾಸ್ತವ ಸ್ಥಿತಿಯನ್ನು ವೀಕ್ಷಿಸಿದರು. ಈ ಬಗ್ಗೆ ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು. ಬಳಿಕ ಸಮೀಪದಲ್ಲಿಯೇ ಆರಂಭವಾಗಿರುವ ಕಾಮಗಾರಿಯನ್ನು ಕಂಡು ಗ್ರಾಮಸ್ಥರನ್ನು ಪ್ರಶ್ನಿಸಿದಾಗ ಆರೋಗ್ಯ ಉಪ ಕೇಂದ್ರದ ಕಟ್ಟಡ ನಿರ್ಮಾಣವಾಗುತ್ತಿರುವುದು ತಿಳಿದು ಬಂತು.
ಶಾಸಕರು ಈ ಬಗ್ಗೆ ಸಂಬಂಧಪಟ್ಟವರಿಗೆ ಕರೆ ಮಾಡಿ ಮಾಹಿತಿ ತಿಳಿಸದೆಯೇ ಕಾಮಗಾರಿ ಆರಂಭಿಸಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೂಡಲೇ ಕಾಮಗಾರಿ ಸ್ಥಗಿತಗೊಳಿಸಿ ಕ್ರಿಯಾಯೋಜನೆಯ ವರದಿ ಸಲ್ಲಿಸಿ ಬಳಿಕ ಕಾಮಗಾರಿಯನ್ನು ಆರಂಭಿಸಿ ಎಂದು ಸೂಚನೆ ನೀಡಿದರು.
ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಪಿಎಸಿಸಿ ನಿರ್ದೇಶಕ ಮಂಜೇಶ್, ಮುಖಂಡರಾದ ಮಲ್ಲಿಕಾರ್ಜುನ, ಮಾದೇವ, ಶೇಖರ್ ಇತರರು ಇದ್ದರು.
ಸಮೀಪದ ಆನಾಪುರ ಗ್ರಾಮಕ್ಕೆ ತೆರಳಿದ ಶಾಸಕರು ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದರು. ಶಾಲಾ, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು. ಸಿಸಿ ರಸ್ತೆ, ಚರಂಡಿ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.
ಮುಖಂಡರಾದ ಮಹದೇವಪ್ಪ, ಗುರುಸ್ವಾಮಿ, ಆನಂದ, ಉಮೇಶ್, ಮಹದೇವಪ್ರಸಾದ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net