ವಾಹನ ಸವಾರರಲ್ಲಿ ಆತಂಕ ಹೆಚ್ಚಿಸಿದ ಕಾಡಾನೆಗಳ ಹಿಂಡು

 ನೆಲ್ಲೂರು ಮಾರ್ಗದಲ್ಲಿ ರಸ್ತೆ ದಾಟುತ್ತಿರುವ ಕಾಡಾನೆಗಳ ಹಿಂಡು.
ನೆಲ್ಲೂರು ಮಾರ್ಗದಲ್ಲಿ ರಸ್ತೆ ದಾಟುತ್ತಿರುವ ಕಾಡಾನೆಗಳ ಹಿಂಡು.
Published on
ಹನೂರು: ತಾಲೂಕಿನ ನಾಲ್‌ರೋಡ್-ನೆಲ್ಲೂರು ಮಾರ್ಗದಲ್ಲಿ ಮಂಗಳವಾರ ಸುಮಾರು 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಣಿಸಿಕೊಂಡು ವಾಹನ ಸವಾರರಲ್ಲಿ ಆತಂಕವನ್ನುಂಟು ಮಾಡಿತು.
ಈ ಮಾರ್ಗವು ಮಲೆ ಮಹದೇಶ್ವರ ವನ್ಯಜೀವಿ ಧಾಮದ ನಡುವೆ ಹಾದು ಹೋಗಿದ್ದು, ನೆಲ್ಲೂರು, ಕೂಡಲೂರು, ಹೂಗ್ಯಂ, ಜಲ್ಲಿಪಾಳ್ಯ ಹಾಗೂ ಈ ಭಾಗದ ಇತರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದೆ.
ಈ ಮಾರ್ಗದಲ್ಲಿ ಕಳೆದ ಒಂದು ತಿಂಗಳಿನಿಂದ ಕಾಡಾನೆಯೊಂದು ಆಗಾಗ್ಗೆ ರಸ್ತೆ ಬದಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ವಾಹನ ಸವಾರರ ಆತಂಕಕ್ಕೆ ಕಾರಣವಾಗಿತ್ತು. ಮಂಗಳವಾರ ಬೆಳಗ್ಗೆ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಈ ಮಾರ್ಗದಲ್ಲಿ ಕಾಣಿಸಿಕೊಂಡಿದ್ದು, ಈ ವೇಳೆ ಆ ಮಾರ್ಗದಲ್ಲಿ ತೆರಳುತ್ತಿದ್ದ ಸವಾರರು ವಾಹನ ಸಂಚಾರವನ್ನು ಸ್ಥಗಿತಗೊಳಿಸಿದರು. ಕಾಡಾನೆಗಳು ಒಂದೇ ಸಮನೆ ರಸ್ತೆಯನ್ನು ದಾಟಿ ಅರಣ್ಯ ಪ್ರದೇಶದೊಳಗೆ ತೆರಳಿದವು. ಬಳಿಕ ಸವಾರರು ನಿಟ್ಟುಸಿರು ಬಿಟ್ಟು ತೆರಳಿದರು. ಇದರ ದೃಶ್ಯವನ್ನು ಸಾರ್ವಜನಿಕರೊಬ್ಬರೂ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲ ತಾಣದಲ್ಲಿ ಹರಿ ಬಿಟ್ಟಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net