ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ

: ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಾಲೂಕು ಪಂಚಾಯಿತಿ  ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ ಹೇಳಿದರು.
: ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ ಹೇಳಿದರು.
Published on
ಕೊಳ್ಳೇಗಾಲ: ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ ಹೇಳಿದರು.
ಪಟ್ಟಣದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆ ಹಾಗೂ ಹೊಸ ಮಾಲಂಗಿ ಸರ್ಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಮಾತನಾಡಿದರು.
ಯಾವುದೇ ಕ್ಷೇತ್ರದಲ್ಲಿ ಸತತ ಪ್ರಯತ್ನದಿಂದ ಸಾಧನೆ ಸಿಗಲಿದೆ. ಭಾಗವಹಿಸುವಿಕೆ ಬಹಳ ಮುಖ್ಯವಾಗಿದೆ. ಸೋಲು ಗೆಲುವಿನ ಸೋಪಾನ ಎಂಬುದನ್ನು ಅರಿಯಬೇಕಿದೆ. ಕ್ರೀಡಾಪಟು ಸೋತೆನೆಂದು ಕುಗ್ಗಬಾರದು ಎಂದು ತಿಳಿಸಿದರು.
ಮಾನಸಿಕ, ದೈಹಿಕ ಸದೃಢತೆ ಮತ್ತು ಆರೋಗ್ಯಕರ ಜೀವನಕ್ಕೆ ಕ್ರೀಡೆ ಸಹಕಾರಿಯಾಗಿದೆ. ಮಕ್ಕಳು ಪಠ್ಯದಷ್ಟೇ ಕ್ರೀಡೆಗೆ ಆದ್ಯತೆ ನೀಡಬೇಕು. ದುಶ್ಚಟಗಳಿಂದ ದೂರ ಉಳಿಯಲು ಕ್ರೀಡೆ ಉಪಯುಕ್ತವಾಗಿದೆ. ಬೆಳೆಯುವ ಸಮಯದಲ್ಲಿ ಮಕ್ಕಳು ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಕಿವಿಮಾತು ಹೇಳಿದರು.
ಈ ವೇಳೆ ನವೆಂಬರ್ ತಿಂಗಳಲ್ಲಿ ನಿವೃತ್ತಿ ಹೊಂದುವ ದೈಹಿಕ ಶಿಕ್ಷಣ ಪರಿವೀಕ್ಷಕ ಸ್ಟೀವನ್ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಗಳಿಸಿದ ತೆಳ್ಳನೂರು ಶಾಲೆಯ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ಬಿಇಒ ಮಂಜುಳಾ, ಬಿ.ಆರ್.ಸಿ ಮಹದೇವ ಕುಮಾರ್, ಅಕ್ಷರ ದಾಸೋಹ ರಂಗಸ್ವಾಮಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಸಿದ್ದರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಲೆಕ್ಸಾಂಡರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ್, ಮುಖ್ಯ ಶಿಕ್ಷಕಿ ವಸಂತಮೇರಿ ಮತ್ತಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net