ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಸನ್ಮಾನ

ಸಿಬಿಎಸ್‌ಇ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಕೊಳ್ಳೇಗಾಲದ ವಾಸವಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳನ್ನು ಸಂಸ್ಥೆ ಆಡಳಿತ ಮಂಡಳಿಯಿಂದ ಸನ್ಮಾನಿಸಲಾಯಿತು. ಎ.ಡಿ.ಕುಮಾರ ಕೃಷ್ಣ, ಶಶಿಧರ್, ಡಾ.ಪಿ.ಜಿ.ಶ್ರೀಧರ್, ಡಾ.ಸಿ.ಪಿ.ಶರತ್, ವೆಂಕಟೇಶ್‌ಬಾಬು ಇದ್ದರು.

Published on
ಕೊಳ್ಳೇಗಾಲ: ಎಸ್ಸೆಸ್ಸೆಲ್ಸಿ ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಪಟ್ಟಣದ ಶ್ರೀ ವಾಸವಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳನ್ನು ಶುಕ್ರವಾರ ಸಂಸ್ಥೆ ಆಡಳಿತ ಮಂಡಳಿಯಿಂದ ಸನ್ಮಾನಿಸಲಾಯಿತು.
ವಿದ್ಯಾ ಸಂಸ್ಥೆ ಅಧ್ಯಕ್ಷ ಎ.ಡಿ.ಕುಮಾರ ಕೃಷ್ಣ ಮಾತನಾಡಿ, ಸಿಬಿಎಸ್‌ಸಿ ವಿಭಾಗದ 2025-26ರ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸುವುದರ ಜತೆಗೆ ಶೇ.100 ರಷ್ಟು ಫಲಿತಾಂಶವನ್ನು ಸಂಸ್ಥೆಗೆ ನೀಡಿದ್ದಾರೆ. ಮುಂದಿನ ಶೈಕ್ಷಣಿಕ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.
ಆರ್ಯವೈಶ್ಯ ಸಂಘದ ಕಾರ್ಯದರ್ಶಿ ಶಶಿಧರ್, ವಾಸವಿ ವಿದ್ಯಾ ಕೇಂದ್ರದ ಕಾರ್ಯದರ್ಶಿ ಡಾ.ಪಿ.ಜಿ.ಶ್ರೀಧರ್, ಜಂಟಿ ಕಾರ್ಯದರ್ಶಿಗಳಾದ ಡಾ.ಸಿ.ಪಿ ಶರತ್, ವೆಂಕಟೇಶ್ ಬಾಬು, ನಿರ್ದೇಶಕರಾದ ಡಾ.ಆಶಿಕ್‌ವಿ.ಓಲೈಟಿ, ರಾಜೇಶ್, ಶಾಲೆ ಪ್ರಾಂಶುಪಾಲ ಡಾ.ಎಸ್.ದಯಾಪ್ರಸಾದ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net