ಈ ವೇಳೆ ಜಿಲ್ಲಾ ಆದಿವಾಸಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ನಾಗೇಂದ್ರ ಮಾತನಾಡಿ, ಶ್ರೀ ಮಲೆಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಮೆದಗನಾಣೆ ಗಿರಿಜನರ ಹಾಡಿಯಲ್ಲಿ 4 ತಲೆಮಾರಿನಿಂದ ಜನರು ವಾಸಿಸುತ್ತಿದ್ದಾರೆ. ಇಲ್ಲಿ 45 ಕುಟುಂಬಗಳು ವಾಸಿಸುತ್ತಿದ್ದು, ಸುಮಾರು 300ಕ್ಕೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ. ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ವಿದ್ಯುತ್ ಸೌಕರ್ಯ ಇಲ್ಲ. ಇದೀಗ ವಿದ್ಯುತ್ ಸೌಕರ್ಯ ಕಲ್ಪಿಸಲು ಮುಂದಾಗಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಆದರೆ ಸಂಪರ್ಕ ಕಲ್ಪಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈ ಬಗ್ಗೆ ಸೆಸ್ಕ್ ಅಧಿಕಾರಿಗಳನ್ನು ವಿಚಾರಿಸಿದರೆ ಅರಣ್ಯ ಇಲಾಖೆ ಅನುಮತಿ ನೀಡುತ್ತಿಲ್ಲ ಎನ್ನುತ್ತಾರೆ. ಇತ್ತ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಇಲ್ಲಿನ ಜನರು ರಾತ್ರಿಯ ವೇಳೆ ವಿದ್ಯುತ್ ಸೌಕರ್ಯ ಇಲ್ಲದೆ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲಾಗಿದೆ. ಈ ವೇಳೆ ಉಪವಾಸ ಸತ್ಯಾಗ್ರಹ ಯಾರಾದರು ಮೃತಪಟ್ಟರೆ ಈ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ. ಆದ್ದರಿಂದ ಸಂಬಂಧಪಟ್ಟ ಅರಣ್ಯ ಹಾಗೂ ಸೆಸ್ಕ್ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.