ಲೊಕ್ಕನಹಳ್ಳಿ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ

ಲೊಕ್ಕನಹಳ್ಳಿ ಕೆಪಿಎಸ್ ಶಾಲೆಯಲ್ಲಿ ಒ ಸ್ಯಾಟ್ ಸಂಸ್ಥೆ ವತಿಯಿಂದ ನಿರ್ಮಿಸಿರುವ ಶಾಲಾ ಕೊಠಡಿ ಹಸ್ತಾಂತರ ಕಾರ್ಯಕ್ರಮವನ್ನು ಬಿಇಒ ಮಹೇಶ್ ಉದ್ಘಾಟಿಸಿದರು. ವಸಂತ ನಾಗರಾಜ್, ರವಿಕಿರಣ್, ಶಿವರಾಜು, ಮಾದೇಶ್ ಇತರರಿದ್ದರು.
ಲೊಕ್ಕನಹಳ್ಳಿ ಕೆಪಿಎಸ್ ಶಾಲೆಯಲ್ಲಿ ಒ ಸ್ಯಾಟ್ ಸಂಸ್ಥೆ ವತಿಯಿಂದ ನಿರ್ಮಿಸಿರುವ ಶಾಲಾ ಕೊಠಡಿ ಹಸ್ತಾಂತರ ಕಾರ್ಯಕ್ರಮವನ್ನು ಬಿಇಒ ಮಹೇಶ್ ಉದ್ಘಾಟಿಸಿದರು. ವಸಂತ ನಾಗರಾಜ್, ರವಿಕಿರಣ್, ಶಿವರಾಜು, ಮಾದೇಶ್ ಇತರರಿದ್ದರು.
Published on
ಹನೂರು: ತಾಲೂಕಿನ ಲೊಕ್ಕನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಸಂತ ನಾಗರಾಜ್ ಮತ್ತು ಬೂದುಗೆರೆ ನಾಗರಾಜ್ ಗೌರವಾರ್ಥ ಒಸ್ಯಾಟ್ ಸಂಸ್ಥೆ ವತಿಯಿಂದ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ 4 ಶಾಲಾ ಕೊಠಡಿಗಳನ್ನು ಗುರುವಾರ ಉದ್ಘಾಟಿಸಲಾಯಿತು.
ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಬಿಇಒ ಮಹೇಶ್ ಅವರು, ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಲೊಕ್ಕನಹಳ್ಳಿ ಕೆಪಿಎಸ್ ಶಾಲೆಯಲ್ಲಿ ಒಸ್ಯಾಟ್ ಸಂಸ್ಥೆ ದಾನಿಗಳ ನೆರವಿನಿಂದ 60 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿಯನ್ನು ನಿರ್ಮಿಸಿರುವುದು ನಿಜಕ್ಕೂ ಮೆಚ್ಚುಗೆಯ ಸಂಗತಿ. ಇದರಿಂದ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಿದಂತಾಗಿದ್ದು, ಕಲಿಕೆಗೆ ಪೂರಕವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡು ಓದಿನ ಕಡೆ ಹೆಚ್ಚು ಗಮನಹರಿಸುವುದರ ಮೂಲಕ ಶೈಕ್ಷಣಿಕವಾಗಿ ಸಾಧನೆ ಮಾಡಬೇಕು. ಶಿಕ್ಷಕರು ಮಕ್ಕಳಲ್ಲಿ ಕಲಿಕಾಮಟ್ಟವನ್ನು ಹೆಚ್ಚಿಸುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಶಾಲಾ ಕೊಠಡಿಯಲ್ಲಿ ಶುಚಿತ್ವವನ್ನು ಕಾಯ್ದುಕೊಳ್ಳಬೇಕು. ಸಮರ್ಪಕವಾಗಿ ನಿರ್ವಹಣೆ ಮಾಡುವುದರ ಮೂಲಕ ದೀರ್ಘಕಾಲ ಬಾಳಿಕೆ ಬರುವಂತೆ ನೋಡಿಕೊಳ್ಳಬೇಕು. ಇನ್ನು ಹನೂರು ಶೈಕ್ಷಣಿಕ ವಲಯದ ಕೆಲವು ಶಾಲೆಗಳಲ್ಲಿ ಕೊಠಡಿ ಅಗತ್ಯತೆ ಇದೆ. ಆದ್ದರಿಂದ ಸಂಸ್ಥೆ ಈ ಬಗ್ಗೆ ಗಮನಹರಿಸಿ ಕೊಠಡಿ ನಿರ್ಮಿಸಿದರೆ ಮಕ್ಕಳಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ನಿವೃತ್ತ ಬಿಇಒ ಶಿವರಾಜು ಮಾತನಾಡಿ, ಶಾಲೆಯಲ್ಲಿ ಹೆಚ್ಚಿನ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಕರು ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಆದರೆ ಕೊಠಡಿ ಸಮಸ್ಯೆ ಇತ್ತು. ಈ ಬಗ್ಗೆ ಒಸ್ಯಾಟ್ ಸಂಸ್ಥೆ ಗಮನಕ್ಕೆ ತರಲಾಗಿತ್ತು. ಈ ಬಗ್ಗೆ ಮನಗಂಡ ಸಂಸ್ಥೆಯು ದಾನಿಗಳ ನೆರವಿನಿಂದ ಸುಸಜ್ಜಿತ ಕೊಠಡಿಯನ್ನು ನಿರ್ಮಿಸಿರುವುದು ಮಕ್ಕಳ ಶಿಕ್ಷಣಕ್ಕೆ ವರದಾನವಾಗಿದೆ ಎಂದರು.
ಒ ಸ್ಯಾಟ್ ಸಂಸ್ಥೆ ನಿರ್ದೇಶಕ ಬಾಲಕೃಷ್ಣ ಮಾತನಾಡಿ, ಹೆಚ್ಚು ಮಕ್ಕಳನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯವನ್ನು ಒದಗಿಸುವುದು ಸಂಸ್ಥೆಯ ಮುಖ್ಯ ಉದ್ದೇಶ. ಈ ದೆಸೆಯಲ್ಲಿ ದಾನಿಗಳ ನೆರವಿನಿಂದ ಒಂದು ಸಲಕ್ಕೆ ಒಂದೇ ಶಾಲೆ ಎಂಬ ಧ್ಯೇಯದೊಂದಿಗೆ ಶಾಲೆಗಳಿಗೆ ಅಗತ್ಯ ಸೌಕರ್ಯವನ್ನು ಕಲ್ಪಿಸಲಾಗಿದೆ. ಸಂಸ್ಥೆ ವತಿಯಿಂದ ಲೊಕ್ಕನಹಳ್ಳಿಯಲ್ಲಿ ನಿರ್ಮಿಸಿರುವ ಶಾಲಾ ಕೊಠಡಿ 117ನೇಯದಾಗಿದೆ. ಸಮರ್ಪಕ ನಿರ್ವಹಣೆಯೊಂದಿಗೆ ಬಳಕೆ ಮಾಡಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಮಕ್ಕಳು ಮಾದರಿಯೊಂದಿಗೆ ಮಾಹಿತಿ ನೀಡಿದರು.
ದಾನಿಗಳಾದ ವಸಂತ ನಾಗರಾಜ್, ರವಿಕಿರಣ್, ಹಂಸ ರವಿಕಿರಣ್, ಸಂಸ್ಥೆ ನಿರ್ದೇಶಕರಾದ ಸುಬ್ರಹ್ಮಣ್ಯ, ರಾಮಮೂರ್ತಿ, ಗ್ರಾಪಂ ಅಧ್ಯಕ್ಷೆ ಮಂಗಳಾ ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷೆ ಚೈತ್ರಾ, ಬಿಆರ್‌ಸಿ ವೆಂಕಟೇಶ್, ಶಿಕ್ಷಣ ಸಂಯೋಜಕರಾದ ಅಶೋಕ್, ಚಿನ್ನಪ್ಪಯ್ಯ, ರವೀಂದ್ರ, ಮುಖ್ಯ ಶಿಕ್ಷಕ ಮಾದೇಶ್ ಹಾಗೂ ಶಿಕ್ಷಕರು, ಪಾಲಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net