ಜಿಲ್ಲೆಯ ಚಾಮರಾಜನಗರ ತಾಲೂಕಿನ ವ್ಯಾಪ್ತಿಯಲ್ಲಿ 260, ಗುಂಡ್ಲುಪೇಟೆ 165, ಯಳಂದೂರು 65 ಹಾಗೂ ಕೊಳ್ಳೇಗಾಲ ಮತ್ತು ಹನೂರು ತಾಲೂಕಿನ ವ್ಯಾಪ್ತಿಯಲ್ಲಿ 270 ಕಾರ್ಯಕರ್ತರನ್ನು ಒಳಗೊಂಡಂತೆ ಒಟ್ಟು 760 ಆಶಾ ಕಾರ್ಯಕರ್ತರು ಸೇವೆ ಸಲ್ಲಿಸುತ್ತಿದ್ದಾರೆ. ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳ ಆರೈಕೆ, ಪಲ್ಸ್ ಪೊಲೀಯೋ ಅಭಿಯಾನ, ಕಷ್ಠರೋಗ ಅಭಿಯಾನ ಹಾಗೂ ಇನ್ನಿತರೆ ಅಭಿಯಾನಗಳಲ್ಲಿ ಸೇವೆ ಸಲ್ಲಿಸುವುದು ಹಾಗೂ ಆರೋಗ್ಯ ಇಲಾಖೆಯ ಇನ್ನಿತರೆ ಸರ್ವೇ ಹಾಗೂ ಯೋಜನೆಗಳ ಯಶಸ್ಸಿಗೆ ಆಶಾ ಕಾರ್ಯಕರ್ತರ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅಂತಹ ಆಶಾಗಳಿಗೆ ರಾಜ್ಯ ಸರ್ಕಾರದಿಂದ ತಿಂಗಳಿಗೆ 5000 ರೂ, ಗೌರವ ಧನವನ್ನು ನೀಡಲಾಗುತ್ತಿದೆ. ಜತೆಗೆ ಕೇಂದ್ರ ಸರ್ಕಾರದ ವತಿಯಿಂದ 2000-3000 ರೂ, ವರೆಗೂ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ.