ಬೈಲೂರು ಭಾಗವು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿದ್ದು, ಇಲ್ಲಿನ ಜಮೀನುಗಳಿಗೆ ರಾತ್ರಿ ವೇಳೆ ಆಗಾಗ್ಗೆ ಕಾಡಾನೆಗಳು ಲಗ್ಗೆ ಇಟ್ಟು ಫಸಲನ್ನು ನಾಶಪಡಿಸುತ್ತಿವೆ. ಕಾಡಾನೆಗಳ ಹಾವಳಿಯನ್ನು ತಡೆಗಟ್ಟುವಂತೆ ಈ ಭಾಗದ ರೈತರು ಹಲವು ಬಾರಿ ಪ್ರತಿಭಟನೆ ನಡೆಸಿದರಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಹಾಗಾಗಿ ಕಾಡಾನೆಗಳು ಜಮೀನುಗಳಿಗೆ ಲಗ್ಗೆ ಇಡುತ್ತಿರುವುದು ಮುಂದುವರಿದಿದೆ.