ಹನೂರಿನಲ್ಲಿ 27ರಂದು ಅನಿರ್ದಿಷ್ಟಾವಧಿ ಪ್ರತಿಭಟನೆ

ಹನೂರಿನಲ್ಲಿ ವಿವಿಧ ರೈತಪರ ಸಂಘಟನೆಗಳಿಂದ ಸಭೆ ಆಯೋಜಿಸಲಾಗಿತ್ತು. ಅಮ್ಜದ್ ಖಾನ್, ಪ್ರಸಾದ್, ಲೋಕೇಶ್ ಗೌಡ ಇತರರು ಇದ್ದರು.
ಹನೂರಿನಲ್ಲಿ ವಿವಿಧ ರೈತಪರ ಸಂಘಟನೆಗಳಿಂದ ಸಭೆ ಆಯೋಜಿಸಲಾಗಿತ್ತು. ಅಮ್ಜದ್ ಖಾನ್, ಪ್ರಸಾದ್, ಲೋಕೇಶ್ ಗೌಡ ಇತರರು ಇದ್ದರು.
Published on

ಹನೂರು:

ತಾಲೂಕಿನ ತೊಮಿಯಾರ್ ಪಾಳ್ಯ ಸಮೀಪದ ಕಾವೇರಿ ವನ್ಯಜೀವಿ ವಲಯದಲ್ಲಿ ನಡೆದ ಶೂಟೌಟ್ ಪ್ರಕರಣ ಖಂಡಿಸಿ ಆ.27ರಂದು ಹನೂರಿನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಬುಧವಾರ ಆಯೋಜಿಸಿದ್ದ ವಿವಿಧ ರೈತಪರ ಸಂಘಟನೆಗಳ ಸಭೆಯಲ್ಲಿ ನಿರ್ಧರಿಸಲಾಯಿತು.

ಪಟ್ಟಣದ ಪಶು ಇಲಾಖೆ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ರೈತ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ವಿವಿಧ ಸಂಘಟನೆ ಪದಾಧಿಕಾರಿಗಳಾದ ಪ್ರಸಾದ್, ಅಮ್ಜದ್ ಖಾನ್ ಹಾಗೂ ಮಾದಪ್ಪ ಮಾತನಾಡಿ, ಅರಣ್ಯ ಇಲಾಖೆ ಸಿಬ್ಬಂದಿ ಮೂವರನ್ನು ಗುಂಡಿಕ್ಕಿ ಕೊಂದಿರುವುದು ಖಂಡನೀಯ. ಇದರಿಂದ ಮೃತರ ಕುಟುಂಬಗಳು ಕಷ್ಟವನ್ನು ಎದುರಿಸುವಂತಾಗಿದೆ. ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಶೂಟೌಟ್ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಅರಣ್ಯ ಸಚಿವರು ಮೃತರ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ತಿಳಿಸಿ ಸೂಕ್ತ ಪರಿಹಾರ ನೀಡಬೇಕು. ಈ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು. ಇಂತಹ ಘಟನೆ ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರೈತ ಸಂಘಟನೆ ಪದಾಧಿಕಾರಿಗಳಾದ ರಾಜಣ್ಣ, ಲೋಕೇಶ್ ಗೌಡ, ಚಿಕ್ಕರಾಜು, ಪುಟ್ಟಣ್ಣ, ಕನಕಮ್ಮ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net