ಹನೂರಿನ ಜಿ.ವಿ. ಗೌಡ ಪ್ರೌಢಶಾಲೆಯಲ್ಲಿ ಆಯೋಜಿಸಿದ್ಧ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮವನ್ನು ಕೆ.ಎನ್. ಚೈತ್ರಾ ಉದ್ಘಾಟಿಸಿದರು. ನಂದಕುಮಾರ್, ಅಶೋಕ್‌ಕುಮಾರ್, ಮಹಾದೇವ, ಶಾಂತರಾಜು ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ತಹಸೀಲ್ದಾರ್ ಕೆ.ಎನ್.ಚೈತ್ರಾ ಅಭಿಮತ
ಹನೂರು: ಸಮಾಜದಲ್ಲಿನ ಅಸಮಾನತೆ ಆರೋಗ್ಯವಂತ ಸಮಾಜಕ್ಕೆ ಮಾರಕ. ಅಸಮಾನತೆಯನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಅಪಾರ ಎಂದು ತಹಸೀಲ್ದಾರ್ ಕೆ.ಎನ್. ಚೈತ್ರಾ ತಿಳಿಸಿದರು.
ಪಟ್ಟಣದ ಜಿ.ವಿ.ಗೌಡ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಾತಿ, ಧರ್ಮ, ಭಾಷೆ, ಲಿಂಗ ಹಾಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲೂ ತಾರತಮ್ಯ ಮಾಡದೇ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಹಾಗೂ ಹಕ್ಕುಗಳನ್ನು ನೀಡುವುದೇ ಸಾಮಾಜಿಕ ನ್ಯಾಯದ ಉದ್ದೇಶ. ಆದರೆ ಸಮಾಜದಲ್ಲಿ ಅಸಮಾನತೆ ಇದ್ದು, ಜನರು ಶೋಷಣೆಗೆ ಒಳಗಾಗಬೇಕಾದ ಸ್ಥಿತಿ ಇದೆ. ಇದು ಉತ್ತಮ ಸಮಾಜಕ್ಕೆ ಮಾರಕವಾಗಿದ್ದು, ತೊಡೆದು ಹಾಕುವುದು ಅಗತ್ಯವಾಗಿದೆ ಎಂದರು.
12ನೇ ಶತಮಾನದಲ್ಲಿ ಅನೇಕ ಶರಣರು ಸಮಾಜದಲ್ಲಿ ಅಸಮಾನತೆಯನ್ನು ತೊಡೆದು ಹಾಕುವುದರ ಮೂಲಕ ಸಮಾನತೆಯ ಸಮಾಜವನ್ನು ಕಟ್ಟಲು ಶ್ರಮಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ಈ ಆಶಯಕ್ಕೆ ಸಂವಿಧಾನದ ರಕ್ಷಣೆ ನೀಡಿ ಕಾನೂನಿನ ಬಲ ತುಂಬಿದ್ದಾರೆ. ಆದ್ದರಿಂದ ಪ್ರತಿಯೊಬ್ಬರಿಗೂ ಸಮಾನತೆಗೆ ದೊರಕಿದಾಗ ಮಾತ್ರ ಸಮ ಸಮಾಜವನ್ನು ನಿರ್ಮಿಸಲು ಸಾಧ್ಯ. ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ವಿಶ್ವಸಂಸ್ಥೆಯು 2009 ರಿಂದ ಪ್ರತಿ ವರ್ಷ ಫೆ.20ರಂದು ವಿಶ್ವ ಸಾಮಾಜಿಕ ದಿನವನ್ನು ಆಚರಿಸಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಸಾಮಾಜಿಕ ನ್ಯಾಯಕ್ಕೆ ಪೂರಕವಾಗಿ ನಡೆದುಕೊಳ್ಳಬೇಕು. ಜತೆಗೆ ಈ ಬಗ್ಗೆ ಸಾರ್ವಜನಿಕರಲ್ಲೂ ಅರಿವು ಮೂಡಿಸುವಂತಹ ಕೆಲಸವಾಗಬೇಕು ಎಂದು ತಿಳಿಸಿದರು.
ವಕೀಲರಾದ ಅಶೋಕ್‌ಕುಮಾರ್, ನಂದಕುಮಾರ್ ಮಾತನಾಡಿದರು. ತಾಪಂ ವ್ಯವಸ್ಥಾಪಕ ರಮೇಶ್, ಸಬ್ ಇನ್ಸ್‌ಪೆಕ್ಟರ್ ಸಾಹೇಬಗೌಡ, ಮುಖ್ಯ ಶಿಕ್ಷಕ ಮಹಾದೇವ, ಶಿಕ್ಷಕರಾದ ಶಾಂತರಾಜು, ಜಿ.ಲೋಕೇಶ್, ಪ್ರದೀಪ್‌ಕುಮಾರ್, ಗೌತಮಿ ಹಾಗೂ ಇನ್ನಿತರರು ಇದ್ದರು.