ತೋಟದ ಮನೆಗಳಿಗೆ ವಿದ್ಯುತ್ ಪೂರೈಸಲು ಪಟ್ಟು

ಕೊಳ್ಳೇಗಾಲ ತಾಲೂಕು ದೊಡ್ಡಿಂದುವಾಡಿ ಸರ್ಕಲ್‌ನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ನಡೆಸಿದ ಪ್ರತಿಭಟನೆಯಲ್ಲಿ ಸೆಸ್ಕ್ ಇಇ ರೈತರಿಂದ ಮನವಿ ಪತ್ರ ಸ್ವೀಕರಿಸಿದರು.
ಕೊಳ್ಳೇಗಾಲ ತಾಲೂಕು ದೊಡ್ಡಿಂದುವಾಡಿ ಸರ್ಕಲ್‌ನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ನಡೆಸಿದ ಪ್ರತಿಭಟನೆಯಲ್ಲಿ ಸೆಸ್ಕ್ ಇಇ ರೈತರಿಂದ ಮನವಿ ಪತ್ರ ಸ್ವೀಕರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ದೊಡ್ಡಿಂದುವಾಡಿಯಲ್ಲಿ ರೈತರ ಪ್ರತಿಭಟನೆ
  • ಸೆಸ್ಕ್ ಅಧಿಕಾರಿಗಳ ವಿರುದ್ಧ ಆಕ್ರೋಶ
ಕೊಳ್ಳೇಗಾಲ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಸಿಂಗನಲ್ಲೂರು ಗ್ರಾಮ ಘಟಕದ ವತಿಯಿಂದ ದೊಡ್ಡಿಂದುವಾಡಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು.
ರಸ್ತೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಸೆಸ್ಕ್ ವಿರುದ್ಧ ಘೋಷಣೆ ಕೂಗುವ ಮೂಲಕ ಸೆಸ್ಕ್ ಶಾಖಾ ಕಚೇರಿ ಮುಂಭಾಗಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.
ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ರಾತ್ರಿ ವೇಳೆ ಈ ಭಾಗದ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಬೇಕು. 7 ಗಂಟೆ ಪಂಪ್‌ಸೆಟ್‌ಗಳಿಗೆ ತ್ರೀಫೇಸ್ ವಿದ್ಯುತ್ ನಿರಂತರವಾಗಿ ನೀಡಬೇಕು. ಜಮೀನುಗಳಲ್ಲಿ ಜೋತು ಬಿದ್ದಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸಬೇಕು. ಹಳೇ ಕಬ್ಬಿಣದ ಕಂಬಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕಾಗಮಿಸಿದ ಸೆಸ್ಕ್ ಕಾರ್ಯಪಾಲಕ ಇಂಜಿನಿಯರ್ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿ ನನ್ನ ವ್ಯಾಪ್ತಿಗೆ ಬರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸುವ ಭರವಸೆ ನೀಡಿದರು. ಬಳಿಕ ರೈತರು ಪ್ರತಿಭಟನೆ ಕೈಬಿಟ್ಟರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಜಿಲ್ಲಾ ಉಪಾಧ್ಯಕ್ಷ ಅರೇಪಾಳ್ಯ ನಾಗರಾಜು, ಜಿಲ್ಲಾ ಅಹವಾಲು ಸದಸ್ಯ ಕಚೇರಿ ಮಹದೇವ, ತಾಲೂಕು ಉಪಾಧ್ಯಕ್ಷ ಬೆಟ್ಟೇಗೌಡ, ತಾಲೂಕು ಪ್ರಧಾನ ಕಾರ್ಯದರ್ಶಿ ಪುಟ್ಟೇಗೌಡ, ಕಾರ್ಯಾಧ್ಯಕ್ಷ ಸೂರಪುರ ಕುಮಾರ್, ಹನೂರು ತಾಲೂಕು ಅಧ್ಯಕ್ಷ ಪಳನಿಸ್ವಾಮಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಕ್ತಿವೇಲ್, ತವಮಣಿ, ಚಾರ್ಲಿಸ್, ಮಲ್ಲಪ್ಪ, ಸಿಂಗನಲ್ಲೂರು ನಾಗೇಂದ್ರ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net