ಗ್ರಾಮದಲ್ಲಿ ಸುಮಾರು 100ಕ್ಕೂ ಹೆಚ್ಚು ಮನೆಗಳಿವೆ. ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತೊಂಬೆಯನ್ನು ನಿರ್ಮಿಸಲಾಗಿದ್ದು, ನೀರು ಪೂರೈಕೆ ಸ್ಥಗಿತಗೊಂಡು ಹಲವು ವರ್ಷಗಳೇ ಕಳೆದಿದೆ. ಜಲ ಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನಲ್ಲಿ ಸಂಪರ್ಕವನ್ನು ಕಲ್ಪಿಸಲಾಗಿದೆ. ಆದರೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಪಿಡಿಒ ಅವರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.