ಕೆಪಿಎಸ್‌ಸಿ ಪರೀಕ್ಷೆ ಅಕ್ರಮವನ್ನು ತನಿಖೆಮಾಡಿ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಶ್ರೀರೂಪಾ ಅವರಿಗೆ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ವತಿಯಿಂದ ಮನವಿ ಸಲ್ಲಿಸಲಾಯಿತು. ಚಾ.ರಂ.ಶ್ರೀನಿವಾಸ್‌ಗೌಡ, ಪಣ್ಯದಹುಂಡಿ ರಾಜು, ಪರ್ವತ್ ರಾಜು, ರಾಚಪ್ಪ ಇನ್ನಿತರರಿದ್ದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಶ್ರೀರೂಪಾ ಅವರಿಗೆ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ವತಿಯಿಂದ ಮನವಿ ಸಲ್ಲಿಸಲಾಯಿತು. ಚಾ.ರಂ.ಶ್ರೀನಿವಾಸ್‌ಗೌಡ, ಪಣ್ಯದಹುಂಡಿ ರಾಜು, ಪರ್ವತ್ ರಾಜು, ರಾಚಪ್ಪ ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಖಿಲ ಕರ್ನಾಟಕ ಕನ್ನಡ ಮಹಾಸಭಾ ವತಿಯಿಂದ ಮನವಿ
  • ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ ಸಲ್ಲಿಕೆ
  • ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹ
ಚಾಮರಾಜನಗರ: ರಾಜ್ಯದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ವತಿಯಿಂದ ಗುರುವಾರ ಮನವಿ ಸಲ್ಲಿಸಲಾಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಅಧ್ಯಕ್ಷ ಚಾ.ರಂ.ಶ್ರೀನಿವಾಸ್‌ಗೌಡ ಮಾತನಾಡಿ, ಈ ಬಾರಿಯ ಕೆಪಿಎಸ್‌ಸಿಯಲ್ಲಿ ನಡೆದ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕಳೆದ ಎರಡು ದಿನಗಳಿಂದ ಚರ್ಚೆಯಾಗುತ್ತಿದೆ. ಈಗಾಗಲೇ ಅಔಕಾಶ ವಂಚಿತ ವಿದ್ಯಾರ್ಥಿಗಳು ಇದರ ಕುರಿತು ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಅದಲ್ಲದೇ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಈ ಕುರಿತು ಕೆಪಿಎಸ್‌ಸಿ ಮೂಲಕ ವರದಿ ಕೇಳಿದ್ದಾರೆ.
ಇದರಿಂದ ಮೇಲ್ನೊಟಕ್ಕೆ ಅಕ್ರಮ ನಡೆದಿರುವುದು ಕಂಡು ಬರುತ್ತಿದೆ ಎಂದು ಆರೋಪಿಸಿದರು.
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಅಕ್ರಮ ನಡೆದರೇ ಸಾವಿರಾರು ವಿದ್ಯಾರ್ಥಿಗಳಿಎಗ ತೊಂದರೆಯಾಗಲಿದೆ. ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯ ನಿರ್ನಾಮವಾದಂತಾಗುತ್ತದೆ. ಈ ನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆಯ ಅಕ್ರಮ ಕುರಿತು ಸೂಕ್ತ ತನಿಖೆ ನಡೆಸಬೇಕು. ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹೋರಾಟಗಾರ ಪಣ್ಯದಹುಂಡಿ ರಾಜು, ಪರ್ವತ್ ರಾಜು, ರಾಚಪ್ಪ ಹಾಗೂ ಇತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net