ಜಿಟಿಟಿಸಿ ತರಬೇತಿ ಕೇಂದ್ರದ ಪ್ರಾಂಶುಪಾಲ ಎಸ್.ವಿನಯ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ನೀಡುವ ಉದ್ದೇಶದಿಂದ 2007ರಲ್ಲಿ ಶಾಸಕರಾಗಿದ್ದ ಎಚ್.ಎಸ್.ಮಹದೇವಪ್ರಸಾದ್ ಅವರು ಗುಂಡ್ಲುಪೇಟೆಯಲ್ಲಿ ಸ್ಥಾಪಿಸಿದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರವು ಕರ್ನಾಟಕ ಸರ್ಕಾರ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಯ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಡಿಪ್ಲೊಮಾ ಇನ್ ಮೆಕ್ರೋನಿಕ್ಸ್ ತರಬೇತಿ ನೀಡುತ್ತಿದೆ. 3 ವರ್ಷದ ತರಬೇತಿ ಮತ್ತು 1 ವರ್ಷದ ಕಡ್ಡಾಯ ಕೈಗಾರಿಕಾ ತರಬೇತಿಯನ್ನು ಒಳಗೊಂಡಿರುವ ಈ ತರಬೇತಿ ಕೋರ್ಸ್‌ಗಳು ನೂರರಷ್ಟು ಉದ್ಯೋಗ ಅವಕಾಶ ಕಲ್ಪಿಸುತ್ತಿವೆ ಎಂದು ಮಾಹಿತಿ ನೀಡಿದರು.