ಬಂಡಳ್ಳಿಯಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ

 ಬಂಡಳ್ಳಿಯ ಶ್ರೀ ಚನ್ನಿಗರಾಯ ಸ್ವಾಮಿ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಶ್ರೀ ಕೃಷ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಂಡಳ್ಳಿಯ ಶ್ರೀ ಚನ್ನಿಗರಾಯ ಸ್ವಾಮಿ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಶ್ರೀ ಕೃಷ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
Published on
ಹನೂರು: ತಾಲೂಕಿನ ಬಂಡಳ್ಳಿ ಗ್ರಾಮದ ಶ್ರೀ ಚನ್ನಿಗರಾಯ ಸ್ವಾಮಿ ದೇಗುಲದಲ್ಲಿ ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಗರುಡೋತ್ಸವ, ಉತ್ಸವ ಮೂರ್ತಿಯ ಮೆರವಣಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ದೇಗುಲವನ್ನು ಮುಸುಕಿನ ಜೋಳದ ತೆನೆ, ವಿವಿಧ ಫಲ-ಪುಷ್ಪ ಹಾಗೂ ತಳಿರು ತೋರಣದಿಂದ ಸಿಂಗರಿಸಲಾಗಿತ್ತು. ವಿದ್ಯುತ್ ದೀಪಾಲಂಕಾರ ಕಣ್ಮನ ಸೆಳೆಯುವಂತಿತ್ತು. ಗುರುವಾರ ದೇಗುಲದಲ್ಲಿ ಸ್ವಾಮಿಗೆ ವಿವಿಧ ಅಭಿಷೇಕ, ದೇವತಾ ಕಾರ್ಯ ನೆರವೇರಿಸಲಾಯಿತು. ಶುಕ್ರವಾರ ಬೆಳಗ್ಗೆ 5 ಗಂಟೆಯಿಂದ 6ರವರೆಗೆ ದೇಗುಲದಲ್ಲಿ ಶಾಂತಿ ಹೋಮ ನಡೆಯಿತು. ಸ್ವಾಮಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತು. ದೇಗುಲದ ಒಳಾಂಗಣದಲ್ಲಿ ಕೃಷ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿವಿಧ ಬಗೆಯ ತಿಂಡಿ ತಿನಿಸುಗಳನ್ನಿರಿಸಿ ಪೂಜೆ ಸಲ್ಲಿಸಲಾಯಿತು.
ಮಧ್ಯಾಹ್ನ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿದ್ದ ಪಲ್ಲಕ್ಕಿಯಲ್ಲಿ ಕೂರಿಸಿ ಸತ್ತಿಗೆ, ಸೂರಿಪಾನಿ ಹಾಗೂ ವಾದ್ಯ ಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಭಕ್ತರು ಜಯಘೋಷಗಳನ್ನು ಕೂಗಿದರು. ಯುವಕರು ಕುಣಿದು ಸಂಭ್ರಮಿಸಿದರು. ಬಂಡಳ್ಳಿ ಸೇರಿದಂತೆ ತಾಲೂಕಿನ ವಿವಿಧೆಡೆಯಿಂದ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದರು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net