ಪಟಾಕಿ ಸಿಡಿಸಿ ಸಂಭ್ರಮಿಸಿದ ‘ಕೈ’ ಕಾರ್ಯಕರ್ತರು

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಹನೂರಿನಲ್ಲಿ ಎಲ್‌ಇಡಿ ಪರದೆ ಅಳವಡಿಸಿ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿತ್ತು.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಹನೂರಿನಲ್ಲಿ ಎಲ್‌ಇಡಿ ಪರದೆ ಅಳವಡಿಸಿ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿತ್ತು.
Published on
ಹನೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ  ಸ್ವೀಕರಿಸಿದ ಹಿನ್ನೆಲೆಯಲ್ಲಿ ಬುಧವಾರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. 
ಪಟ್ಟಣದ ಬಹುತೇಕ ಕಡೆಗಳಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಫ್ಲೆಕ್ಸ್‌ಗಳನ್ನು ಅಳವಡಿಸಿ ಶುಭಾಶಯವನ್ನು ಕೋರಿದರು. ಬೆಳಗ್ಗೆ ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ದೇಗುಲದಲ್ಲಿ ಡಿಕೆಶಿ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಡಿಕೆಶಿ ಅವರು ಪ್ರಮಾಣ ವಚನ ಸ್ವೀಕರಿಸುವುದನ್ನು ಸಾರ್ವಜನಿಕರು ವೀಕ್ಷಿಸಲು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಎಲ್‌ಇಡಿ ಪರದೆಯನ್ನು ಅಳವಡಿಸಲಾಗಿತ್ತು. ಡಿಕೆಶಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹನೂರಿನಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಜಯಘೋಷವನ್ನು ಮೊಳಗಿಸಿ ಸಿಹಿ ವಿತರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net