ಕಾರ್ಯಕ್ರಮದ ಸಾನ್ನಿಧ್ಯವನ್ನು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥೇಶ್ವರ ಸ್ವಾಮೀಜಿ ವಹಿಸಲಿದ್ದಾರೆ. ಸಂಸದ ಸುನೀಲ್ ಬೋಸ್, ಶಾಸಕ ಎಂ.ಆರ್.ಮಂಜುನಾಥ್, ಮಾಜಿ ಶಾಸಕರಾದ ಆರ್.ನರೇಂದ್ರ, ಪರಿಮಳಾ ನಾಗಪ್ಪ, ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್. ದತ್ತೇಶ್‌ಕುಮಾರ್ ಹಾಗೂ ಒಕ್ಕಲಿಗರ ಸಂಘದ ರಾಜ್ಯ, ಜಿಲ್ಲಾ ಮಟ್ಟದ ಪದಾಧಿಕಾರಿಗಳು, ಇನ್ನಿತರ ಗಣ್ಯರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾಹಿತಿ ಕ್ಯಾತನಹಳ್ಳಿ ಶ್ರೀನಿವಾಸ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.