ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದವನನ್ನು ಪಟ್ಟಣದ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ಕೊಡಸೋಗೆ ಗ್ರಾಮದ ಶ್ರೀನಿವಾಸ ಲಾಟರಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸಿ 6 ಸಾವಿರ ರೂ. ಮೌಲ್ಯದ 100 ಕ್ಕೂ ಹೆಚ್ಚಿನ ಟಿಕೆಟ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.