ಕೇರಳಂ ಲಾಟರಿ ಮಾರುತ್ತಿದ್ದವನ ಬಂಧನ

ಆರೋಪಿ ಶ್ರೀನಿವಾಸ್
ಆರೋಪಿ ಶ್ರೀನಿವಾಸ್
Published on

ಪಟ್ಟಣ ಬಸ್ ನಿಲ್ದಾಣ ಬಳಿ ಅಕ್ರಮವಾಗಿ ಕೇರಳಂ ರಾಜ್ಯದ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪಟ್ಟಣದ ಎಲೆಕೇರಿ ಬಡಾವಣೆ ನಿವಾಸಿ ಶ್ರೀನಿವಾಸ್ ಬಂಧಿತ. ಆ.20ರಂದು ಲಾಟರಿ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ಮಾಡಿ 90 ಲಾಟರಿ ಟಿಕೆಟ್‌ಗಳು ಹಾಗೂ 6,960 ರೂ.ನಗದು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net