ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ

ಕೊಳ್ಳೇಗಾಲ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭದಲ್ಲಿ  ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಸಂವಿಧಾನ ಪೀಠಿಕೆ ಯನ್ನು ಭೋಧಿಸಿದರು. ಬಸವರಾಜು, ರಾಜೇಂದ್ರ, ಕುಮಾರ್, ಮಂಜುಳಾ ಇತರರು ಇದ್ದಾರೆ.
ಕೊಳ್ಳೇಗಾಲ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಸಂವಿಧಾನ ಪೀಠಿಕೆ ಯನ್ನು ಭೋಧಿಸಿದರು. ಬಸವರಾಜು, ರಾಜೇಂದ್ರ, ಕುಮಾರ್, ಮಂಜುಳಾ ಇತರರು ಇದ್ದಾರೆ.
Published on
ಕೊಳ್ಳೇಗಾಲ: ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಕ್ಷಣ ಇಲಾಖೆ ಹಾಗು ಸಮಾಜ ಕಲ್ಯಾಣ ಇಲಾಖೆ ಕೊಳ್ಳೇಗಾಲ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದ ಅಡಿಯಲ್ಲಿ ದೇಶ ಪ್ರಜೆಗಳಿಗೆ ವಿವಿಧ ಹಕ್ಕುಗಳನ್ನು ನೀಡಿದೆ. ಹಾಗೆಯೇ ನಾಗರಿಕರ ಕರ್ತವ್ಯಗಳೂ ಇವೆ. ಪ್ರಜೆಗಳು ಇವುಗಳನ್ನು ಸಮರ್ಥವಾಗಿ ನಿರ್ವಹಿಸಿದಾಗ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಹತ್ವ ಬರುತ್ತದೆ ಎಂದರು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ವ್ಯವಸ್ಥೆಗೆ ಎಲ್ಲರೂ ಗೌರವ ನೀಡಬೇಕು. ಇವುಗಳ ಕಾರ್ಯ ವೈಖರಿ ಸಮರ್ಥವಾಗಿ ಇದ್ದಾಗ ಸಾಮಾಜಿಕ ಸಾಮರಸ್ಯ ದೊರಕುತ್ತದೆ ಎಂದರು.
ಬಹುಮುಖ್ಯವಾಗಿ ಸಂವಿಧಾನವು ಪ್ರತಿಯೊಬ್ಬರಿಗೂ ಶಿಕ್ಷಣ ಪಡೆಯುವ ಹಕ್ಕು ನೀಡಿದೆ. ವಿದ್ಯಾರ್ಥಿಗಳು ಇದನ್ನು ತಿಳಿಯಬೇಕು. ಚೆನ್ನಾ ಗಿ ಓದಿದರೆ ವ್ಯವಸ್ಥೆಯೊಳಗೆ ಉನ್ನತ ಸ್ಥಾನ- ಮಾನಗಳು, ಹುದ್ದೆಗಳನ್ನು ಪಡೆಬಹುದು. ಪಾಲಕರಿಗೆ, ಊರಿಗೆ ಹಿರಿಮೆ ತರಬಹುದು. ಹಾಗಾಗಿ ಮಕ್ಕಳು ವ್ಯಾಸಂಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಮೈಸೂರು ವಿವಿ ಸಹಾಯಕ ಪ್ರಾಧ್ಯಾಪಕ ಡಾ.ಬಿಪಿನ್ ನಾಗರಾಜು ಮಾತನಾಡಿ, ಪ್ರಜಾ ಪ್ರಭುತ್ವಕ್ಕೆ ಗೌರವ ತರುವ ನಿಟ್ಟಿನಲ್ಲಿ ಎಲ್ಲರೂ ನಡೆದುಕೊಳ್ಳಬೇಕು ಎಂದರು.
ಸಂವಿಧಾನ ಬಗ್ಗೆ ಅರಿವಿದ್ದರೆ ಸಮಾಜದಲ್ಲಿ ನಡೆಯುವ ದೌರ್ಜನ್ಯವನ್ನು ತಡೆಯುವ ಸಾಮರ್ಥ್ಯ
ರೂಢಿಸಿಕೊಳ್ಳಬಹುದು ಎಂದರು. ಇದಕ್ಕೂ ಮುನ್ನ ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಬಸವರಾಜು, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ತಾ.ಪಂ ಇಒ ಕುಮಾರ್, ಬಿಇಒ ಮಂಜುಳಾ, ವಕೀಲರ ಸಂಘದ ಅಧ್ಯಕ್ಷ ಎನ್.ಬಸವರಾಜು ಹಾಗು ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net