ಮನೆ ಹಿಂಬಾಗಿಲು ಒಡೆದು ಚಿನ್ನಾಭರಣ ಕಳವು

ಪಟ್ಟಣದ ನಾಯ್ಡು ತೋಟ ಬಡಾವಣೆಯಲ್ಲಿ ಶನಿವಾರ ರಾತ್ರಿ ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ  ಕಳವು ಮಾಡಿರುವ ಸ್ಥಳವನ್ನು ಪೊಲೀಸರು ಪರಿಶೀಲಿಸುತ್ತಿರುವುದು. ರವೀಂದ್ರ, ವರ್ಷಾ, ಚಲುವರಾಜ್ ಇತರರು ಇದ್ದರು.
ಪಟ್ಟಣದ ನಾಯ್ಡು ತೋಟ ಬಡಾವಣೆಯಲ್ಲಿ ಶನಿವಾರ ರಾತ್ರಿ ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಕಳವು ಮಾಡಿರುವ ಸ್ಥಳವನ್ನು ಪೊಲೀಸರು ಪರಿಶೀಲಿಸುತ್ತಿರುವುದು. ರವೀಂದ್ರ, ವರ್ಷಾ, ಚಲುವರಾಜ್ ಇತರರು ಇದ್ದರು.
Published on
ಕೊಳ್ಳೇಗಾಲ : ಪಟ್ಟಣದ ನಾಯ್ಡು ತೋಟ ಬಡಾವಣೆಯಲ್ಲಿ ಶನಿವಾರ ರಾತ್ರಿ ಮನೆಯ ಹಿಂಬಾಗಿಲು ಒಡೆದ ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ.
ನಿವೃತ್ತ ಸೆಸ್ಕ್ ನೌಕರ ರಮೇಶ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, 50 ಗ್ರಾಂ. ಚಿನ್ನಾಭರಣ, 750 ಗ್ರಾಂ ಬೆಳ್ಳಿ ಪದಾರ್ಥಗಳು ಮತ್ತು 1 ಲಕ್ಷ ರೂ. ನಗದನ್ನು ಕಳವಾಗಿದೆ. ರಮೇಶ್ ಅವರು ಇತ್ತೀಚೆಗೆ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಾಗಾಗಿ ಮನೆಯಲ್ಲಿ ರಮೇಶ್ ಅವರ ಪುತ್ರ ಪ್ರಸನ್ನ ಮಾತ್ರ ರಾತ್ರಿ ಉಳಿಯುತ್ತಿದ್ದರು. ಶನಿವಾರ ರಾತ್ರಿ ಪ್ರಸನ್ನ ಮದುವೆ ಕಾರ್ಯಕ್ಕೆ ತೆರಳಿದ್ದು, ಕಳ್ಳರು ಮನೆ ಹಿಂಬಾಗಿಲು ಒಡೆದು ಬೀರುವಿನಲ್ಲಿದ್ದ ಚಿನ್ನ, ಬೆಳ್ಳಿ ಸೇರಿದಂತೆ ನಗದನ್ನು ಕಳವು ಮಾಡಿದ್ದಾರೆ. ಚಾಲಕಿ ಕಳ್ಳರು ಮನೆಯಲ್ಲಿದ್ದ ಸಿಸಿ ಕ್ಯಾಮರಾದ ಡಿವಿಆರ್ ಅನ್ನೂ ಕಳಚಿಕೊಂಡು ಹೋಗಿದ್ದಾರೆ.
ಈ ಬಗ್ಗೆ ಪ್ರಸನ್ನ ಪಟ್ಟಣ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳ ಪರಿಶೀಲಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಮೋಹನ್, ಸಿಪಿಐ ರವೀಂದ್ರ, ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ವರ್ಷಾ, ಕ್ರೈಂ ಸಿಪಿಐ ಚಲುವರಾಜ್, ಉಮಾವತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net