ಕ್ರೀಡಾಪಟುಗಳಿಗೆ ಕಿಟ್ ವಿತರಣೆ

ಚಾಮರಾಜನಗರ ತಾಲೂಕಿನ ಮಸಣಾಪುರ ಯುವ ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.
ಚಾಮರಾಜನಗರ ತಾಲೂಕಿನ ಮಸಣಾಪುರ ಯುವ ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ.ಆರ್.ಕೃಷ್ಣಮೂರ್ತಿ ಕೊಡುಗೆ
ಯಳಂದೂರು: ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮದ ಯುವ ಕ್ರೀಡಾಪಟುಗಳಿಗೆ ಗುರುವಾರ ಕ್ರೀಡಾ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.
ಮಸಣಾಪುರ ಗ್ರಾಮಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಇತ್ತೀಚೆಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದರು. ಈ ವೇಳೆ ಕ್ರೀಡಾ ಸಾಮಗ್ರಿ ಖರೀದಿಸಲು ನೆರವು ನೀಡುವಂತೆ ಗ್ರಾಮದ ಕ್ರೀಡಾಪಟುಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಾಲಿಬಾಲ್, ಶೆಟಲ್ ಕಾಕ್, ಬ್ಯಾಟ್ ಒಳಗೊಂಡ ಕ್ರೀಡಾಕಿಟ್ ಅನ್ನು ಉಚಿತವಾಗಿ ನೀಡುವ ಭರವಸೆ ನೀಡಿದ್ದರು. ಗುರುವಾರ ಕ್ರೀಡಾಪಟುಗಳಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಮಸಣಾಪುರ ವಿಜಯ್ ಮೂಲಕ ಕ್ರೀಡಾ ಸಾಮಗ್ರಿಗಳನ್ನು ನೀಡಿದರು.
ಕ್ರೀಡಾಪಟುಗಳಾದ ಹರೀಶ್ ಪ್ರಸಾದ್, ದೃಶ್ಯ ಕಿರಣ್, ಜೋಗಿ, ಮಹೇಶ್ ಸೇರಿದಂತೆ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net