ಪಟ್ಟಣದ ಸರ್ಕಾರಿ ಎಸ್‌ವಿಕೆ ಬಾಲಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಮತ್ತು ಪಾಲಕ-ಶಿಕ್ಷಕರ ಮಹಾಸಭೆ ಉದ್ಘಾಟನೆ ಕಾರ್ಯಕ್ರಮಕ್ಕೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ಚಾಲನೆ ನೀಡಿದರು. ಎಂ.ಮಂಜುಳಾ, ಹರ್ಷ, ಜೋಸೆಫ್ ಅಲೆಕ್ಸಾಂಡರ್, ಡಾ.ಮಂಗಳಮೂರ್ತಿ ಇತರರಿದ್ದರು.
Published on:
Copied
Follow Us
ಕೊಳ್ಳೇಗಾಲ:ಪಟ್ಟಣದ ಸರ್ಕಾರಿ ಎಸ್‌ವಿಕೆ ಬಾಲಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ಮತ್ತು ಪಾಲಕ-ಶಿಕ್ಷಕರ ಮಹಾಸಭೆ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ಮಾತನಾಡಿ, ಇಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ ದಿನ ಆಚರಣೆ ನಡೆಯುತ್ತಿದೆ. ಅದರಂತೆ ಸರ್ಕಾರಿ ಎಸ್‌ವಿಕೆ ಪದವಿಪೂರ್ವ ಕಾಲೇಜು ಈ ಶಾಲೆಯಲ್ಲಿ ವಿನೂತನವಾಗಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗುಲಾಬಿ ಹೂವುಗಳನ್ನು ನೀಡಿ ಆತ್ಮೀಯವಾಗಿ ಮಕ್ಕಳನ್ನು ಬರ ಮಾಡಿಕೊಳ್ಳಲಾಗಿದೆ. ನಮ್ಮ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ದಾಖಲಿಸುವಂತೆ ಪಾಲಕರಿಗೆ ಮನವಿ ಮಾಡಿದರು.
ಕಲಿಕಾ ಪ್ರೋತ್ಸಾಹದಾಯಕ ಯೋಜನೆಗಳಾದ ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆ ನೆರವೇರಿಸಿದರು. ಪ್ರತಿಯೊಂದು ಮಗುವೂ ಶಿಕ್ಷಣದಿಂದ ವಂಚಿತವಾಗಬಾರದು ಎಂದರು.
2026-27ನೇ ಸಾಲಿನಲ್ಲಿ ಪ್ರಾರಂಭವಾಗುವ ಎಲ್‌ಕೆಜಿಯಿಂದ 12 ನೇ ತರಗತಿವರೆಗೆ ನಿಮ್ಮ ಮಕ್ಕಳನ್ನು ದಾಖಲಿಸಿ ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಿದರು.
ಇದಕ್ಕೂ ಮೊದಲು ಶಾಲಾ-ಕಾಲೇಜಿಗೆ ಮೊದಲ ದಿನದಂದು ಹಾಜರಾದ ವಿದ್ಯಾರ್ಥಿಗಳಿಗೆ ಶಿಕ್ಷಕರು ಮತ್ತು ಉಪನ್ಯಾಸಕರು ಹೂವು ನೀಡಿ ಸ್ವಾಗತಿಸಿದರು,
ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಸಿಬಿಸಿ ಸಮಿತಿಯ ಉಪಾಧ್ಯಕ್ಷ ಹರ್ಷ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೋಸೆಫ್ ಅಲೆಕ್ಸಾಂಡರ್, ಪ್ರಾಂಶುಪಾಲ ಡಾ.ಮಂಗಳಮೂರ್ತಿ, ಉಪ ಪ್ರಾಂಶುಪಾಲ ಸಿ.ಆರ್.ವಿಶ್ವನಾಥ್, ಎಸ್‌ಡಿಎಂಸಿ ಅಧ್ಯಕ್ಷರು, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಅಕ್ಬರ್ ಹಾಗೂ ಪಾಲಕರು ಇದ್ದರು.