ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಬುಧವಾರ ಅಕ್ರಮವಾಗಿ ಉಡ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರ ದಳ ಪೊಲೀಸರು ವಶಕ್ಕೆ ಪಡೆದಿರುವುದು.
Published on:
Copied
Follow Us
ಕೊಳ್ಳೇಗಾಲ:ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಬುಧವಾರ ಅಕ್ರಮವಾಗಿ ಉಡ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರ ದಳ ಪೊಲೀಸರು ಬಂಧಿಸಿದ್ದಾರೆ.
ಹುಣಸೂರು ಪಟ್ಟಣದ ಸರ್ದಾರ್(45) ಹಾಗೂ ರಫಿ (44) ಬಂಧಿತ ಆರೋಪಿಗಳು.
ಸತ್ತೇಗಾಲ ಹ್ಯಾಂಡ್ ಪೋಸ್ಟ್‌ನ ಕಾವೇರಿ ನದಿ ದಡದ ಬಳಿ ಒಂದು ಉಡವನ್ನು ಹಿಡಿದು ಮಾರಾಟಕ್ಕೆ ಸಾಗಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರ ದಳದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವಿನಾಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಸಂಬಂಧ ಸಿಐಡಿ ಅರಣ್ಯ ಸಂಚಾರ ದಳದ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿಯಲ್ಲಿ ಸಿಐಡಿ ಪೊಲೀಸ್ ಅರಣ್ಯ ಸಂಚಾರ ದಳದ ಸಿಬ್ಬಂದಿ ಬಸವರಾಜು, ಸ್ವಾಮಿ, ಜಮೀಲ್, ರಾಮಚಂದ್ರ, ಲತಾ, ಪ್ರಭಾಕರ್, ಬಸವರಾಜು ಇತರರಿದ್ದರು.