ಜಡೇಮುನೇಶ್ವರ, ರಾಜಮುನೇಶ್ವರಸ್ವಾಮಿಗೆ ಕುಂಭಾಭಿಷೇಕ

ಮಲೆಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿದ್ದ ಜಡೇಮುನೇಶ್ವರ ಹಾಗೂ ರಾಜ ಮುನೇಶ್ವರಸ್ವಾಮಿ ದೇಗುಲದ ಕುಂಭಾಭಿಷೇಕ ಉದ್ಘಾಟನಾ ಕಾರ್ಯಕ್ರಮವನ್ನು ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಉದ್ಘಾಟಿಸಿದರು. ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಎಂ.ಆರ್. ಮಂಜುನಾಥ್, ವಾಣಿ ಶಿವರಾಮ್, ಡಾ.ಎಸ್.ದತ್ತೇಶ್‌ಕುಮಾರ್, ಎ.ಈ.ರಘು ಇತರರಿದ್ದರು.
ಮಲೆಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿದ್ದ ಜಡೇಮುನೇಶ್ವರ ಹಾಗೂ ರಾಜ ಮುನೇಶ್ವರಸ್ವಾಮಿ ದೇಗುಲದ ಕುಂಭಾಭಿಷೇಕ ಉದ್ಘಾಟನಾ ಕಾರ್ಯಕ್ರಮವನ್ನು ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಉದ್ಘಾಟಿಸಿದರು. ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಎಂ.ಆರ್. ಮಂಜುನಾಥ್, ವಾಣಿ ಶಿವರಾಮ್, ಡಾ.ಎಸ್.ದತ್ತೇಶ್‌ಕುಮಾರ್, ಎ.ಈ.ರಘು ಇತರರಿದ್ದರು.
Published on
ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಜನತಾ ಕಾಲನಿಯಲ್ಲಿ ಬುಧವಾರ ಜಡೇ ಮುನೇಶ್ವರ ಹಾಗೂ ರಾಜ ಮುನೇಶ್ವರಸ್ವಾಮಿ ದೇಗುಲದಲ್ಲಿ ಆಯೋಜಿಸಿದ್ದ ಕುಂಭಾಭಿಷೇಕವು ವಿಜೃಂಭಣೆಯಿಂದ ನೆರವೇರಿತು.
ಕುಂಭಾಭಿಷೇಕದ ಹಿನ್ನೆಲೆ ದೇಗುಲವನ್ನು ವಿವಿಧ ಪುಷ್ಪ, ತಳಿರು ತೋರಣ ಹಾಗೂ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಹೋಮ, ಹವನಗಳೊಂದಿಗೆ ಅರ್ಚಕರು ಮಂತ್ರ ಪಠಣದೊಂದಿಗೆ ಕುಂಭಾಭಿಷೇಕವನ್ನು ನೆರವೇರಿಸಲಾಯಿತು. ದೇಗುಲದ ವತಿಯಿಂದ ಪ್ರಸಾದ ವಿನಿಯೋಗಿಸಲಾಯಿತು.
ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿ, ಗ್ರಾಮದಲ್ಲಿ ಜಡೇಮುನೇಶ್ವರ ಹಾಗೂ ರಾಜ ಮುನೇಶ್ವರ ಸ್ವಾಮಿ ದೇಗುಲದಲ್ಲಿ ಕುಂಭಾಭಿಷೇಕ ಕಾರ್ಯಕ್ರಮವನ್ನು ಆಯೋಜಿಸಿರುವುದು ಪುಣ್ಯದ ಕೆಲಸ. ಧಾರ್ಮಿಕ ಭಕ್ತಿ ಭಾವನೆಯ ಪ್ರತೀಕ. ಇಂತಹ ಕಾರ್ಯಗಳು ಹೆಚ್ಚಾಗಬೇಕು. ದೇಗುಲದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುವುದು. ಇನ್ನು ಪ್ರತಿಯೊಬ್ಬರೂ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ಶೈಕ್ಷಣಿಕ ಪ್ರಗತಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು. ಇದರಿಂದ ಭವಿಷ್ಯದಲ್ಲಿ ಮಕ್ಕಳು ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಸಾಲೂರು ಬೃಹನ್ಮಠದ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಮೈಸೂರು ಉರಿಲಿಂಗಿ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಗ್ರಾಪಂ ಅಧ್ಯಕ್ಷೆ ಅರ್ಚನಾ, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷೆ ವಾಣಿ ಶಿವರಾಮ್, ಉಪಾಧ್ಯಕ್ಷ ಅಣಗಳ್ಳಿ ಬಸವರಾಜು, ಕೊಳ್ಳೇಗಾಲ ಮಾನಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಎಸ್.ದತ್ತೇಶ್‌ಕುಮಾರ್, ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಬಿಜೆಪಿ ಮುಖಂಡ ನಿಶಾಂತ್ ಹಾಗೂ ಇನ್ನಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net