ಮನೆಮೇಲಿಂದ ಬಿದ್ದು ಕೂಲಿ ಕಾರ್ಮಿಕ ಮೃತ

crime
crime
Published on
ಕೊಳ್ಳೇಗಾಲ: ತಾಲೂಕಿನ ಜಿನಕಹಳ್ಳಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಮೇಲಿಂದ ಗುರುವಾರ ಆಕಸ್ಮಿಕವಾಗಿ ಕೆಳಗೆ ಬಿದ್ದು ಕೂಲಿ ಕಾರ್ಮಿಕ ಮೃತಪಟ್ಟಿದ್ದಾನೆ.
ಯಳಂದೂರು ತಾಲೂಕಿನ ಅಗರ ಗ್ರಾಮದ ಎಲೆಕ್ಟ್ರಿಕಲ್ ಕೂಲಿ ಕಾರ್ಮಿಕ ಮಹೇಶ್ (47) ಮೃತ. ಈತ ಜಿನಕನಹಳ್ಳಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿನ ಮನೆಯ ಕೂಲಿ ಕೆಲಸಕ್ಕೆ ತೆರಳಿದ್ದಾಗ ಮಹಡಿಯಿಂದ ಬಿದ್ದು ತಲೆ ಭಾಗಕ್ಕೆ ತೀವ್ರ ಪೆಟ್ಟಾಗಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲಿ ಮೃತ್ಪಟ್ಟಿದ್ದಾನೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಶವಗಾ ರದಲ್ಲಿ ಶವಪರೀಕ್ಷೆ ನಡೆಸಿದ ಬಳಿಕ ಶುಕ್ರವಾರ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net