ಬಸ್ ನಿಲ್ದಾಣದಲ್ಲಿ ಕೂಲಿ ಕಾರ್ಮಿಕ ಸಾವು

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Published on
ಕೊಳ್ಳೇಗಾಲ: ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ವ್ಯಕ್ತಿಯೊಬ್ಬರು ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರಿನ ಕುಂಬಳಗೂಡು ಗಂಗಾಧರಪ್ಪ(55) ಮೃತಪಟ್ಟವರು. ಇವರು 20 ವರ್ಷಗಳ ಹಿಂದೆ ಕುಟುಂಬದಿಂದ ದೂರವಾಗಿದ್ದರು. ಐದಾರು ವರ್ಷಗಳ ಹಿಂದೆ ಕೊಳ್ಳೇಗಾಲಕ್ಕೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ ಐದು ತಿಂಗಳಿಂದ ಬಸ್ ನಿಲ್ದಾಣದ ಖಾಸಗಿ ಹೋಟೆಲ್‌ನಲ್ಲಿ ಕ್ಲೀನಿಂಗ್ ಕೆಲಸ ಮಾಡಿಕೊಂಡಿದ್ದರು. ಊರಿಗೆ ಹೋಗುವುದಾಗಿ ಹೇಳಿ ಹಣ ಪಡೆದು ವಿಪರೀತವಾಗಿ ಮದ್ಯ ಕುಡಿದು ಬಸ್ ನಿಲ್ದಾಣದ ಒಳಗಡೆ ಮಲಗಿದ್ದಾಗ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿದರು. ಮೃತನ ಪುತ್ರ ರವಿಕಿರಣ್ ದೂರು ನೀಡಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net