ಲೊಕ್ಕನಹಳ್ಳಿಗೆ ಸಂಪರ್ಕ ರಸ್ತೆಗೆ ಡಾಂಬರೀಕರಣ

ಹನೂರಿನಲ್ಲಿ ಲೊಕ್ಕನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಂ.ಆರ್ ಮಂಜುನಾಥ್ ಭೂಮಿಪೂಜೆ ನೆರವೇರಿಸಿದರು. ಬಸವರಾಜು, ಸಿದ್ದರಾಜು, ಮಂಜೇಶ್, ನಿಂಗರಾಜು ಇತರರಿದ್ದರು.
ಹನೂರಿನಲ್ಲಿ ಲೊಕ್ಕನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಂ.ಆರ್ ಮಂಜುನಾಥ್ ಭೂಮಿಪೂಜೆ ನೆರವೇರಿಸಿದರು. ಬಸವರಾಜು, ಸಿದ್ದರಾಜು, ಮಂಜೇಶ್, ನಿಂಗರಾಜು ಇತರರಿದ್ದರು.
Published on
ಹನೂರು: ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಲೊಕ್ಕನಹಳ್ಳಿಗೆ ಸಂಪರ್ಕ ಕಲ್ಪಿಸುವ ತಟ್ಟೆಹಳ್ಳದವರೆಗಿನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಂ.ಆರ್.ಮಂಜುನಾಥ್ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕ, ಈ ಮಾರ್ಗದ ರಸ್ತೆಯು ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿತ್ತು. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚರಿಸಲು ತೊಂದರೆ ಅನುಭವಿಸುತಿದ್ದರು. ರಸ್ತೆ ಅಭಿವೃದ್ಧಿಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದರು. ಇದರ ಅಗತ್ಯತೆ ಮನಗಂಡು ಈಗಾಗಲೇ ರಸ್ತೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸದ್ಯ ಜನರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 90 ಲಕ್ಷ ರೂ.ವಿಶೇಷ ಅನುದಾನದಲ್ಲಿ ಡಾಂಬರೀಕರಣಕ್ಕೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ ಎಂದು ಹೇಳಿದರು.
ಪಟ್ಟಣದ ಬಸ್ ನಿಲ್ದಾಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸ್ವಾಮಿಹಳ್ಳದವರೆಗಿನ ರಸ್ತೆಯನ್ನು ಡಾಂಬರೀಕರಣಗೊಳಿಸಲು ಕ್ರಮವಹಿಸಲಾಗಿದೆ. ಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆಗೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಂಬರುವ ಬಜೆಟ್‌ನಲ್ಲಿ ಅನುಮೋದನೆ ಸಿಗುವ ಸಾಧ್ಯತೆ ಇದೆ. ಬಳಿಕ ಕಾವೇರಿ ಕುಡಿಯುವ ನೀರಿನ ಪೈಪ್‌ಲೈನ್ ಹಾಗೂ ಯುಜಿಡಿ ಕಾಮಗಾರಿ ಕೈಗೊಂಡ ಬಳಿಕ ಮುಖ್ಯ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಪಿಎಸಿಸಿ ನಿರ್ದೇಶಕ ಮಂಜೇಶ್, ಪಪಂ ಮಾಜಿ ಸದಸ್ಯ ಬಸವರಾಜು, ಮುಖಂಡರಾದ ಗೋವಿಂದ, ಸಿದ್ದರಾಜು, ನಿಂಗರಾಜು, ವಿಜಯಕುಮಾರ್, ಮಹದೇವ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net