ರಂಗನಾಥಪುರ ಬಳಿ ಚಿರತೆ ಸೆರೆ

ಯಳಂದೂರು ತಾಲೂಕಿನ ರಂಗನಾಥಪುರ ಗ್ರಾಮದ ಜಮೀನಿನಲ್ಲಿ ಅರಣ್ಯ ಇಲಾಖೆಯ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿರುವುದು.
ಯಳಂದೂರು ತಾಲೂಕಿನ ರಂಗನಾಥಪುರ ಗ್ರಾಮದ ಜಮೀನಿನಲ್ಲಿ ಅರಣ್ಯ ಇಲಾಖೆಯ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ನಿಟ್ಟುಸಿರು ಬಿಟ್ಟ ರೈತರು
ಯಳಂದೂರು: ತಾಲೂಕಿನ ಬಿಳಿಗಿರಿರಂಗನಬೆಟ್ಟದ ಕಾಡಂಚಿನ ಗ್ರಾಮವಾದ ರಂಗನಾಥಪುರ ಬಳಿ ಜಮೀನಿನಲ್ಲಿ ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಬುಧವಾರ ಮುಂಜಾನೆ ಚಿರತೆ ಸೆರೆಯಾಗಿದೆ.
ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಓಡಾಡುತ್ತಿರುವುದನ್ನು ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದ್ದಾರೆ. ಈ ಸಂಬಂಧ ಮಂಗಳವಾರ ಅರಣ್ಯ ಸಿಬ್ಬಂದಿ ಡ್ರೋನ್ ಮೂಲಕ ಕಾರ್ಯಾಚರಣೆ ನಡೆಸಿ ನಾಯಿ ಕಳೇಬರವನ್ನು ಸತೀಶ್ ಎಂಬುವರ ಜಮೀನಿನಲ್ಲಿ ಪತ್ತೆ ಹಚ್ಚಿ ಇಲ್ಲೇ ಬೋನ್‌ನ್ನು ಇರಿಸಿದ್ದರು.
ಇದನ್ನು ತಿನ್ನಲು ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಬುಧವಾರ ಬೆಳಗಿನ ಜಾವ ಜಮೀನಿಗೆ ತೆರಳಿದ ರೈತ ಸತೀಶ್ ತಮ್ಮ ಜಮೀನಿನಲ್ಲಿ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿರುವ ವಿಚಾರವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂಧಿ ಬೋನಿನಲ್ಲಿದ್ದ ಚಿರತೆಯನ್ನು ತೆಗೆದುಕೊಂಡು ಹೋಗಿ, ಅರಣ್ಯದಲ್ಲಿ ಬಿಡಲಾಗುವುದು ಎಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net