ಗ್ರಾಮದ ಜಮೀನುಗಳ ಬಳಿ ಇರುವ ಕಬ್ಬಿನ ಗದ್ದೆಯ ಬಳಿ ಚಿರತೆ ಓಡಾಟ ನಡೆಸಿದೆ. ಈ ದೃಶ್ಯವನ್ನು ಕೆಲವರು ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಈ ದೃಶ್ಯ ಎಲ್ಲೆಡೆ ವೈರಲ್ ಆಗಿದೆ. ಈ ಭಾಗದ ರೈತರು ತಮ್ಮ ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ. ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಫೆ.9 ರಂದು ಇಲ್ಲಿನ ರಂಗಸ್ವಾಮಿಶೆಟ್ಟಿ ಎಂಬುವರಿಗೆ ಸೇರಿದ ಕರುವೊಂದನ್ನು ಚಿರತೆ ತಿಂದು ಹಾಕಿತ್ತು. ಕೂಡಲೆ ಚಿರತೆಯನ್ನು ಸೆರೆಹಿಡಿಯುವಲ್ಲಿ ಸಂಬಂಧಪಟ್ಟವರು ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.