ಕಕ್ಕೆಹೊಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ

ಕಕ್ಕೆಹೊಲದಲ್ಲಿ ಕಾಣಿಸಿಕೊಂಡ ಚಿರತೆ
ಕಕ್ಕೆಹೊಲದಲ್ಲಿ ಕಾಣಿಸಿಕೊಂಡ ಚಿರತೆ
Published on
ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆಹೊಲ ಗ್ರಾಮದಲ್ಲಿ ಮಂಗಳವಾರ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿದ್ದಾರೆ. ಕಳೆದ ಹಲವು ತಿಂಗಳಿನಿಂದ ಈ ಭಾಗದಲ್ಲಿ ಹಾವಳಿ ನಡೆಸುತ್ತಿರುವ ಚಿರತೆ, ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಿದೆ. ಮಂಗಳವಾರ ಬೆಳಗ್ಗೆ ಗ್ರಾಮದ ಅಮ್ಮಾಚಿ ಎಂಬುವರು ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿತ್ತು. ರಾತ್ರಿ ಗ್ರಾಮ ಸಮೀಪವೇ ಆಗಮಿಸಿದ್ದ ಚಿರತೆಯನ್ನು ಕಂಡು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದರ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net