ತಾಳುಬೆಟ್ಟ ಮಾರ್ಗದಲ್ಲಿ ಚಿರತೆ ಪ್ರತ್ಯಕ್ಷ

 ತಾಳುಬೆಟ್ಟ ಮಾರ್ಗದ ತಡೆಗೋಡೆಯ ಮೇಲೆ ಕಾಣಿಸಿಕೊಂಡ ಚಿರತೆ.
ತಾಳುಬೆಟ್ಟ ಮಾರ್ಗದ ತಡೆಗೋಡೆಯ ಮೇಲೆ ಕಾಣಿಸಿಕೊಂಡ ಚಿರತೆ.
Published on

ಪ್ರಮುಖ ಮುಖ್ಯಾಂಶಗಳು

  • Leopard
ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ತಾಳುಬೆಟ್ಟ ಮಾರ್ಗದಲ್ಲಿ ಶುಕ್ರವಾರ ರಾತ್ರಿ ಮತ್ತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಭಕ್ತರಲ್ಲಿ ಆತಂಕ ಉಂಟು ಮಾಡಿದೆ.
ಮಲೆಮಹದೇಶ್ವರ ವನ್ಯಜೀವಿ ಧಾಮಕ್ಕೆ ಒಳಪಟ್ಟಿರುವ ತಾಳುಬೆಟ್ಟದ ಮಾರ್ಗದಲ್ಲಿ ಕಳೆದ ಜ.21 ರಂದು ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಭಕ್ತರೊಬ್ಬರು ಚಿರತೆ ದಾಳಿಗೆ ಬಲಿಯಾಗಿದ್ದರು. ಜತೆಗೆ ಮಹಾ ಶಿವರಾತ್ರಿ ವೇಳೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿತ್ತು. ಈ ಬಗ್ಗೆ ಭಕ್ತರು ಹಾಗೂ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನಲೆ ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನ್ ಇರಿಸಲಾಗಿದ್ದು, ಸಿಬ್ಬಂದಿಯನ್ನು ನಿಯೋಜಿಸಿರುವುದರ ಮೂಲಕ ನಿಗಾ ವಹಿಸಿದೆ. ಆದರೂ ರಾತ್ರಿ ವೇಳೆ ವಾಹನ ಸವಾರರಿಗೆ ಚಿರತೆ ಆಗಾಗ್ಗೆ ಕಾಣಿಸಿಕೊಳ್ಳುತ್ತಲೇ ಇದೆ. ಶುಕ್ರವಾರ ರಾತ್ರಿ ಸುಮಾರು 8.30ರಲ್ಲಿ ತೆರಳುತ್ತಿದ್ದ ವಾಹನ ಸವಾರರಿಗೆ ಈ ಮಾರ್ಗದ 4ನೇ ತಿರುವಿನ ತಡೆಗೋಡೆಯ ಮೇಲೆ ಚಿರತೆ ಕಾಣಿಸಿಕೊಂಡಿದೆ. ಇದರ ದೃಶ್ಯವನ್ನು ಭಕ್ತರೊಬ್ಬರೂ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net