ಬೋನಿಗೆ ಬಿದ್ದ ಚಿರತೆ

ಗುಂಡ್ಲುಪೇಟೆ ತಾಲೂಕಿನ ಪಡಗೂರು ಸಮೀಪ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ.
ಗುಂಡ್ಲುಪೇಟೆ ತಾಲೂಕಿನ ಪಡಗೂರು ಸಮೀಪ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ.
Published on

ಪ್ರಮುಖ ಮುಖ್ಯಾಂಶಗಳು

  • ಜಮೀನಿನಲ್ಲಿ ಇರಿಸಿದ್ದ ಬೋನು
  • ಬೋನಿಗೆ ಬಿದ್ದ ಚಿರತೆ
ಗುಂಡ್ಲುಪೇಟೆ: ತಾಲೂಕಿನ ಪಡಗೂರು ಗ್ರಾಮದ ಸುತ್ತಮುತ್ತ ಜಾನುವಾರುಗಳನ್ನು ಬಲಿ ಪಡೆಯುತ್ತಿದ್ದ ಚಿರತೆ ಬೋನಿಗೆ ಬಿದ್ದಿದೆ.
ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಮೇಯುತ್ತಿದ್ದ ರೈತರ ಸಾಕುಪ್ರಾಣಿಗಳನ್ನು ಕೊಲ್ಲುತ್ತಿದ್ದ ಚಿರತೆ ಈ ಭಾಗದ ಜನರ ನೆಮ್ಮದಿಗೆಡಿಸಿತ್ತು. ಹಾಗಾಗಿ ಚಿರತೆಯ ಸೆರೆಗೆ ಬಫರ್ ವಲಯದ ಅರಣ್ಯಾಧಿಕಾರಿಗಳು ಗ್ರಾಮದ ರಾಘವನ್ ಎಂಬುವರ ಜಮೀನಿನಲ್ಲಿ ಬೋನು ಇರಿಸಿ ಒಳಗೆ ಮೇಕೆಯನ್ನು ಕೂಡಿ ಹಾಕಿದ್ದರು.
ಭಾನುವಾರ ತಡರಾತ್ರಿ ಮೇಕೆಯನ್ನು ತಿನ್ನಲು ಬೋನಿನೊಳಗೆ ಪ್ರವೇಶಿಸಿದ 3 ರಿಂದ 4 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ವಿಷಯ ತಿಳಿದ ಕೂಡಲೆ ಬೋನನ್ನು ಕೊಂಡೊಯ್ದು ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು ಎಂದು ಪ್ರಭಾರ ವಲಯಾರಣ್ಯಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net