ಉತ್ತಮ ಸಮಾಜ ನಿರ್ಮಾಣಕ್ಕೆ ಸಂಘಟನೆಗಳು ಶ್ರಮಿಸಲಿ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 600ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕೊಳ್ಳೇಗಾಲ ಪಟ್ಟಣದ ಗುರುಭವನದಲ್ಲಿ ಭಾನುವಾರ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಕೊಳ್ಳೇಗಾಲ ಘಟಕದ ನೂತನ ಪದಾಧಿಕಾರಿಗಳ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಎಚ್.ಕೆ.ಮಹಾನಂದ, ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಇತರರು ಇದ್ದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 600ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕೊಳ್ಳೇಗಾಲ ಪಟ್ಟಣದ ಗುರುಭವನದಲ್ಲಿ ಭಾನುವಾರ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಕೊಳ್ಳೇಗಾಲ ಘಟಕದ ನೂತನ ಪದಾಧಿಕಾರಿಗಳ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಎಚ್.ಕೆ.ಮಹಾನಂದ, ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • organizations work
ಕೊಳ್ಳೇಗಾಲ: ಉತ್ತಮ ಸಮಾಜ ಕಟ್ಟಲು ಸಂಘಟನೆಗಳು ಶ್ರಮಿಸಬೇಕು ಎಂದು ಬೆಂಗಳೂರು ಸಿಸಿಬಿ ವಿಭಾಗದ ಎಸಿಸಿ ಎಚ್.ಕೆ.ಮಹಾನಂದ ಹೇಳಿದರು.
ಪಟ್ಟಣದ ಗುರುಭವನದಲ್ಲಿ ಭಾನುವಾರ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಕೊಳ್ಳೇಗಾಲ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ನಿರುದ್ಯೋಗಿ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 600ಕ್ಕಿಂತ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯ ಕರ್ನಾಟಕ ವೇದಿಕೆಯ ಪದಾಧಿಕಾರಿಗಳು ಕನ್ನಡ ನೆಲ, ಜಲ, ಭಾಷೆ ಉಳಿವಿಗಾಗಿ ಶ್ರಮಿಸುವ ಮೂಲಕ ಗಡಿ ಜಿಲ್ಲೆಯಲ್ಲಿ ಉತ್ತಮ ಸಮಾಜವನ್ನು ರೂಪಿಸಬೇಕು. ಸಂಘಟನೆಯಲ್ಲಿ ಸೇವೆ ಸಲ್ಲಿಸುವಾಗ ಯಾವುದೇ ಕಪ್ಪು ಚುಕ್ಕೆ ಬಾರದಂತೆ ನೋಡಿಕೊಳ್ಳುವ ಮೂಲಕ ವಿಜಯ ಕರ್ನಾಟಕ ವೇದಿಕೆ ರಾಜ್ಯಾದ್ಯಂತ ಉತ್ತಮ ಸೇವೆ ಸಲ್ಲಿಸಬೇಕು ಎಂದು ತಿಳಿಸಿದರು.
ಸಂಘಟನೆ ಅಧ್ಯಕ್ಷ ಮಹೇಶ್ ಕುಮಾರ್ ಮಾತನಾಡಿ, ನಮ್ಮ ಸಂಘಟನೆ ಉತ್ತಮ ರೀತಿಯಲ್ಲಿ ಸಮಾಜ ಸೇವೆ ಮಾಡುತ್ತಾ ಬಂದಿದೆ. ಮುಂದೆಯೂ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಸೇವೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಸಂಘಟನೆಯ ನೂತನ ಪದಾಧಿಕಾರಿಗಳು ಪದಗ್ರಹಣ ಮಾಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿರುದ್ಯೋಗ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು.
ಚಾಮುಲ್ ಅಧ್ಯಕ್ಷ ಎಂ.ನಂಜುಂಡಸ್ವಾಮಿ, ಅಂಬೇಡ್ಕರ್ ಸಂಘದ ಅಧ್ಯಕ್ಷ ಆನಂದಮೂರ್ತಿ, ಪ್ರಥಮ ದರ್ಜೆ ಗುತ್ತಿಗೆದಾರ ಓಲೆ ಮಹದೇವ, ಬಿಇಒ ಮಂಜುಳಾ, ಇತಿಹಾಸ ವಿಭಾಗ ಉಪನ್ಯಾಸಕ ಗಿರೀಶ್ ಬಾಬು, ನಗರಸಭೆ ಮಾಜಿ ಅಧ್ಯಕ್ಷ ಶಾಂತರಾಜು, ತಾ.ಪಂ.ಮಾಜಿ ಉಪಾಧ್ಯಕ್ಷ ಬಸವಣ್ಣ, ವಿಜಯ ಕರ್ನಾಟಕ ವೇದಿಕೆ ರಾಜ್ಯ ಉಪಾಧ್ಯಕ್ಷ ದೇವರಾಜು, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಅಶೋಕ್, ಜಿಲ್ಲಾ ಗೌರವಾಧ್ಯಕ್ಷ ವೆಂಕಟಾಚಲ, ಜಿಲ್ಲಾಧ್ಯಕ್ಷ ಶಿವಸುಂದರ್, ತಾಲೂಕು ಅಧ್ಯಕ್ಷ ರೇವಣ್ಣ ಹಾಗೂ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net