ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಉದ್ಯೋಗ ಕೌಶಲ ರೂಢಿಸಿಕೊಳ್ಳಲಿ

ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣೇಶ್ ಪ್ರಸಾದ್ ಉದ್ಘಾಟಿಸಿದರು. ಟಿ.ಜವರೇಗೌಡ, ಎಂ.ಎಸ್.ತನ್ಮಯಿ, ಡಾ.ಮದನಕುಮಾರ್, ಬಿ.ಕುಮಾರಸ್ವಾಮಿ, ಕವಿತಾ, ಪುಳಸೀರಾಂ, ದಿವ್ಯಭಾರತಿ ಇದ್ದರು.
ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣೇಶ್ ಪ್ರಸಾದ್ ಉದ್ಘಾಟಿಸಿದರು. ಟಿ.ಜವರೇಗೌಡ, ಎಂ.ಎಸ್.ತನ್ಮಯಿ, ಡಾ.ಮದನಕುಮಾರ್, ಬಿ.ಕುಮಾರಸ್ವಾಮಿ, ಕವಿತಾ, ಪುಳಸೀರಾಂ, ದಿವ್ಯಭಾರತಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಆಶಯ
ಗುಂಡ್ಲುಪೇಟೆ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ನಾನಾ ಉದ್ಯೋಗ ಕೌಶಲಗಳನ್ನು ರೂಢಿಸಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೇಂಜರ್ಸ್, ರೆಡ್ ಕ್ರಾಸ್ ಹಾಗೂ ವಿವಿಧ ಸಮಿತಿಯ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ವಿದ್ಯಾರ್ಥಿಗಳ ಕಲಿಕೆ ಹಾಗೂ ಉನ್ನತ ಶಿಕ್ಷಣಕ್ಕೆ ಬೇಕಾದ ಪೂರಕ ವ್ಯವಸ್ಥೆಗಳನ್ನು ಮಾಡಿಕೊಡಲಾಗುವುದು. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ತಮ್ಮಲ್ಲಿನ ಪ್ರತಿಭೆಯನ್ನು ಹೊರ ಹಾಕಲು ಸಾಧ್ಯವಾಗುತ್ತದೆ. ಇತ್ತೀಚೆಗೆ ಕೃತಕ ಬುದ್ಧಿಮತ್ತೆ ಬಗ್ಗೆ ತೀವ್ರ ಚರ್ಚೆಗಳಾಗುತ್ತಿದ್ದು, ಉನ್ನತ ಶಿಕ್ಷಣ ಪಡೆಯುವ ಮೂಲಕ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಮಾತನಾಡಿ, ವಿದ್ಯಾರ್ಥಿಗಳು ಕನಸು ಕಾಣಬೇಕು. ಎದೆಗುಂದದೆ ಸಾಧನೆ ಮಾಡುವುದರಿಂದ ಯಶಸ್ಸು ಸಿಗುತ್ತದೆ. ಯಾವಾಗಲೂ ಸಕಾರಾತ್ಮಕವಾಗಿ ಆಲೋಚನೆ ಮಾಡುವುದರಿಂದ ಹಾಗೂ ಸತತ ಪ್ರಯತ್ನ ಇದ್ದರೆ ಗುರಿ ತಲುಪಲು ಸಾಧ್ಯ. ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಉದ್ಯೋಗ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಎಂ.ಎಸ್. ತನ್ಮಯ್, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಬಿ.ಕುಮಾರಸ್ವಾಮಿ, ಪ್ರಾಂಶುಪಾಲ ಡಾ. ಮದನಕುಮಾರ್, ಸಾಂಸ್ಕೃತಿಕ ಸಂಚಾಲಕಿ ಲಕ್ಷ್ಮೀ, ಕ್ರೀಡಾ ಸಂಚಾಲಕ ಪುಟ್ಟರಾಜು, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಚಾಲಕಿ ಕವಿತಾ, ರೋವರ್ಸ್ ಸಂಚಾಲಕರಾದ ಡಾ.ತುಳಸಿರಾಂ, ರೇಂಜರ್ಸ್ ಘಟಕದ ಸಂಚಾಲಕಿ ದಿವ್ಯಾಭಾರತಿ, ರೆಡ್ ಕ್ರಾಸ್ ಸಂಚಾಲಕಿ ಸಂಯುಕ್ತ ಸಿಂಗ್, ವಿಜಯಕುಮಾರ್, ಗ್ರಂಥಪಾಲಕ ಶ್ರೀನಿವಾಸನಾಯಕ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net