ಸೋಲಿಗರು ಶಿಕ್ಷಣದಿಂದ ವಂಚಿತರಾಗದಿರಲಿ

ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಯರಕಗಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಗಿರಿರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಗಿರಿರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೇತಮ್ಮ,  ನಾಗರಾಜು,  ಸತೀಶ್,  ಜಯಶಂಕರ್, ರಾಜು, ರಾಜೇಂದ್ರ, ಸುಮಾ, ತುಳಸಮ್ಮ, ಕಾಂತಮ್ಮ, ಭಾಗ್ಯಮ್ಮ ಇತರರು ಇದ್ದರು.
ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಯರಕಗಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಗಿರಿರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಗಿರಿರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೇತಮ್ಮ, ನಾಗರಾಜು, ಸತೀಶ್, ಜಯಶಂಕರ್, ರಾಜು, ರಾಜೇಂದ್ರ, ಸುಮಾ, ತುಳಸಮ್ಮ, ಕಾಂತಮ್ಮ, ಭಾಗ್ಯಮ್ಮ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಬುಡಕಟ್ಟು ಅಭಿವೃದ್ಧಿ ಸಂಘದ ಕಾರ್ಯದರ್ಶಿ ಸಿ.ಮಾದೇಗೌಡ ಸಲಹೆ
  • ಗಿರಿ ರತ್ನ ಪ್ರಶಸ್ತಿ ಪ್ರದಾನ
ಯಳಂದೂರು: ಬುಡಕಟ್ಟು ಜನಾಂಗವಾದ ಸೋಲಿಗರು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು. ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಡ್ಡಾಯವಾಗಿ ಸೇರಿಸಬೇಕು ಎಂದು ಜಿಲ್ಲಾ ಬುಡಕಟ್ಟು ಅಭಿವೃದ್ಧಿ ಸಂಘದ ಕಾರ್ಯದರ್ಶಿ ಸಿ.ಮಾದೇಗೌಡ ಕರೆ ನೀಡಿದರು.
ತಾಲೂಕಿನ ಬಿಳಿಗಿರಿರಂಗನಬೆಟ್ಟದ ಯರಕನಗದ್ದೆ ಪೋಡಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ಗಿರಿಜನ ಮುಖಂಡರ ಸನ್ಮಾನ ಸಮಾರಂಭದಲ್ಲಿ ಗಿರಿ ರತ್ನ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಸೋಲಿಗರು ಸಾವಿರಾರು ವರ್ಷಗಳಿಂದಲೂ ಕಾಡಿನಲ್ಲಿ ತಮ್ಮ ಜೀವನ ಕಟ್ಟಿಕೊಂಡಿದ್ದಾರೆ. ನಮ್ಮದು ವಿಭಿನ್ನ ಸಂಸ್ಕೃತಿಯಾಗಿದೆ. ಜಾನಪದ ಕ್ಷೇತ್ರದಲ್ಲಿ ನಮ್ಮ ಬೆಟ್ಟದಲ್ಲಿ ಅನೇಕರು ವಿವಿಧ ಸಾಧನೆಗಳನ್ನು ಮಾಡಿದ್ದಾರೆ. ಅನೇಕರು ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ. ಈಚೆಗೆ ನಾವು ಸಮಾಜಮುಖಿಯಾಗಿದ್ದೇವೆ. ಆದರೂ, ನಮ್ಮಲ್ಲಿ ಇನ್ನೂ ಶಿಕ್ಷಣ ಅಷ್ಟು ಪ್ರಗತಿ ಕಂಡಿಲ್ಲ. ಆದರೆ ಶಿಕ್ಷಿತರಾಗುವವರ ಸಂಖ್ಯೆಯಲ್ಲಿ ಏರುಮುಖ ಕಂಡು ಬಂದಿರುವುದು ಉತ್ತಮ ಬೆಳವಣಿಯಾಗಿದೆ ಎಂದರು.
ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವನ್ನು ನೀಡಬೇಕು ಎಂಬುದು ಸರ್ಕಾರದ ನಿಯಮವಾಗಿದೆ. ಹಾಗಾಗಿ ನಮ್ಮ ಮಕ್ಕಳನ್ನು ನಾವು ಶಿಕ್ಷಿತರಾಗಿ ಮಾಡಬೇಕು. ಪಾಲಕರು ತಮ್ಮ ಕುಲ ಕಸುಬುಗಳಿಗೆ ಇವರನ್ನು ತೊಡಗಿಸಿಕೊಳ್ಳುವುದನ್ನು ಬಿಟ್ಟು ಉತ್ತಮ ಶಿಕ್ಷಣ ನೀಡಲು ಪಣ ತೊಡಬೇಕು. ಆಗ ಮಾತ್ರ ನಾವು ಆರ್ಥಿಕವಾಗಿ ಪ್ರಗತಿ ಕಾಣಬಹುದು. ಸರ್ಕಾರದಿಂದ ಬುಡಕಟ್ಟು ಸಮುದಾಯಕ್ಕೆ ಉಚಿತ ಶಿಕ್ಷಣವಿದೆ. ಪ್ರತ್ಯೇಕ, ವಸತಿ ನಿಲಯಗಳೂ ಇವೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಬೆಟ್ಟದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮುಖಂಡರಾದ ವೆಂಕಟೇಶ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮೇಗೌಡ, ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಸವರಾಜು, ರಾಜು, ಬೊಮ್ಮಯ್ಯ ಅವರಿಗೆ ಗಿರಿರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಜಿಪಂ ಮಾಜಿ ಉಪಾಧ್ಯಕ್ಷೆ ಕೇತಮ್ಮ, ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜು, ಬಿಆರ್‌ಪಿ ಸತೀಶ್, ಮುಖ್ಯ ಶಿಕ್ಷಕ ಜಯಶಂಕರ್, ಶಿಕ್ಷಕರಾದ ರಾಜು, ರಾಜೇಂದ್ರ, ಸುಮಾ, ತುಳಸಮ್ಮ, ಕಾಂತಮ್ಮ, ಭಾಗ್ಯಮ್ಮ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net