ಈ ಸಲ ಸಚಿವ ಸಂಪುಟದಲ್ಲಿ ಗಡಿಜಿಲ್ಲೆಗೆ ಅವಕಾಶ ದೊರೆಯುವುದೇ ಎನ್ನುವ ಕುತೂಹಲ ಮನೆ ಮಾಡಿದೆ. ಪಕ್ಷದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್‌ಪ್ರಸಾದ್ ವರಿಷ್ಠರು, ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಮೊದಲ ಬಾರಿಗೆ ಗೆದ್ದಿರುವ ಎಚ್.ಎಂ.ಗಣೇಶ್‌ಪ್ರಸಾದ್ ಹಿರಿಯರಿಗೆ ಅವಕಾಶ ಸಿಗಲಿ ಎನ್ನುವ ಮನೋಭಾವದವರು ಎಂಬ ಮಾತಿದೆ. ಸಿ.ಪುಟ್ಟರಂಗಶೆಟ್ಟಿ ಮತ್ತು ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಕೂಗು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಹಾಗಾಗಿ ಜಿಲ್ಲೆಗೆ ಮಂತ್ರಿಗಿರಿ ಒಲಿಯುತ್ತದೆಯೇ?, ಇಬ್ಬರಲ್ಲಿ ಯಾರಿಗೆ ಅವಕಾಶ ಸಿಗಬಹುದು ಎನ್ನುವ ಚರ್ಚೆಗಳು ಚಾಲ್ತಿಯಲ್ಲಿವೆ.