ಮಡಿವಾಳ ಮಾಚಿದೇವರ ಆದರ್ಶ ಅನುಕರಣೀಯ

ಚಾಮರಾಜನಗರದ ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಟಿ.ಜವರೇಗೌಡ ಉದ್ಘಾಟಿಸಿದರು. ಶಶಿಧರ್, ರೇವಣ್ಣ, ರಮೇಶ್, ಉಪಾಧ್ಯಕ್ಷ ವಿಜಯಕುಮಾರ್,ಗೋವಿಂದರಾಜು, ಸಿದ್ದರಾಜು ಇನ್ನಿತರರಿದ್ದರು.
ಚಾಮರಾಜನಗರದ ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಟಿ.ಜವರೇಗೌಡ ಉದ್ಘಾಟಿಸಿದರು. ಶಶಿಧರ್, ರೇವಣ್ಣ, ರಮೇಶ್, ಉಪಾಧ್ಯಕ್ಷ ವಿಜಯಕುಮಾರ್,ಗೋವಿಂದರಾಜು, ಸಿದ್ದರಾಜು ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Madiwala Machideva's
ಚಾಮರಾಜನಗರ: ಮಡಿವಾಳ ಮಾಚಿದೇವರ ತತ್ವಾದರ್ಶಗಳು ಪ್ರತಿಯೊಬ್ಬರಿಗೂ ಅನುಕರಣೀಯ ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ತಿಳಿಸಿದರು.
ನಗರದ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
12ನೇ ಶತಮಾನದಲ್ಲಿ ಜಾತಿ ವ್ಯವಸ್ಥೆ, ಅಂಧಶ್ರದ್ಧೆ ಮತ್ತು ಅಸಮಾನತೆಗಳ ವಿರುದ್ಧ ವಚನಕಾರರು ನಡೆಸಿದ ಚಳವಳಿ ಸಮಾಜ ಸುಧಾರಣೆಗೆ ಮಹತ್ವದ ದಾರಿ ತೋರಿಸಿದೆ. ಬಸವಣ್ಣ ಅವರ ನೇತೃತ್ವದಲ್ಲಿ ಕಲ್ಯಾಣದಲ್ಲಿ ಆದ ವಚನ ಚಳವಳಿ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆಗಳಿಗೆ ಕಾರಣವಾಯಿತು. ಮಡಿವಾಳ ಮಾಚಿ ದೇವರು ಕೂಡ ಅದೇ ಮಾರ್ಗದಲ್ಲಿ ಸಾಗಿದ್ದರು ಎಂದರು.
ವಚನಗಳ ಮೂಲಕ ಜನಸಾಮಾನ್ಯರಿಗೆ ಅರಿವು ಮೂಡಿಸಿ, ಜಾತಿ ಪದ್ದತಿ ಹಾಗೂ ಮೂಢನಂಬಿಕೆಗಳನ್ನು ತೊಡೆದುಹಾಕುವ ಪ್ರಯತ್ನ ವಚನಕಾರರಿಂದ ನಡೆದಿತು. ಮಡಿವಾಳ ಮಾಚಿದೇವರ ಹಾದಿಯಾಗಿ ಎಲ್ಲ ವಚನಕಾರರು ವೇದಉಪನಿಷತ್ತಿನ ತತ್ವಗಳನ್ನು ಸರಳವಾಗಿ ಜನರಿಗೆ ತಲುಪಿಸುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು.
ನಿವೃತ್ತ ಶಿಕ್ಷಕ ಸಿದ್ದಯ್ಯ ಮಾತನಾಡಿ, ಮಡಿವಾಳ ಮಾಚಿದೇವ ಅವರು ಶಿವ ಶರಣರಿಗಿಂತ ವಿಭಿನ್ನರಾಗಿದ್ದು, ಅಪಾರ ಸಂಖ್ಯೆಯ ವಚನಗಳನ್ನು ರಚಿಸಿದ್ದಾರೆ. ಅವರು ತಮ್ಮ ವಚನಗಳ ಮೂಲಕ ಸಮಾಜಕ್ಕೆ ದಾರಿದೀಪವಾಗಿದ್ದಾರೆ. ದೇವರೇ ಎದುರಿಗೆ ಬಂದರೂ ಕಾಯಕ ನಿಲ್ಲಬಾರದು ಎಂಬ ಸಂದೇಶವನ್ನು ಅವರು ತಮ್ಮ ವಚನಗಳಲ್ಲಿ ಸಾರಿದ್ದಾರೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಮಡಿವಾಳ ಜನಾಂಗದ ಜಿಲ್ಲಾಧ್ಯಕ್ಷ ರೇವಣ್ಣ, ತಾಲೂಕು ಅಧ್ಯಕ್ಷ ರಮೇಶ್, ಉಪಾಧ್ಯಕ್ಷ ವಿಜಯಕುಮಾರ್, ಮುಖಂಡರಾದ ಗೋವಿಂದರಾಜು, ಸಿದ್ದರಾಜು, ನಾಗರಾಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಹಾಗೂ ಇತರರು ಹಾಜರಿದ್ದರು.
ಮುಖಂಡರ ಅಸಮಾಧಾನ
ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮಕ್ಕೆ ನಿಗದಿತ ಸಮಯಕ್ಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಆಗಮಿಸದಿರುವುದಕ್ಕೆ ಜನಾಂಗದ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಯಂತಿ ಆಚರಣೆ ನಡೆಯಲಿದೆ ಎಂದು ಮೊದಲಿಗೆ ತಿಳಿಸಿ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ನಂತರ ಯಾವುದೇ ಮಾಹಿತಿ ನೀಡದೆ ಕಾರ್ಯಕ್ರಮವನ್ನು ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರಕ್ಕೆ ಸ್ಥಳಾಂತರಿಸಲಾಗಿದೆ. ಇದರಿಂದ ಕಾರ್ಯಕ್ರಮಕ್ಕೆ ಜನರ ಬರುವಿಕೆ ಕಡಿಮೆಯಾಗಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಆಗಮಿಸದಿರುವುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಅವರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ರಾಜು ಅವರು ಪ್ರತಿಕ್ರಿಯಿಸಿ, ಜಿಲ್ಲಾಡಳಿತ ಭವನದ ಸಭಾಂಗಣದ ಸ್ಥಳದಲ್ಲಿ ರಿಪೇರಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ. ಜಯಂತಿ ಆಚರಣೆಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಬಳಿಕ ಕಾರ್ಯಕ್ರಮ ನಡೆಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net