ಮುಳ್ಳೂರಿನಲ್ಲಿ ಮಹಾಗಣಪತಿ ದೇಗುಲ ಉದ್ಘಾಟನೆ

ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನೂತನ ಅರಳಿ ಮರದ ಮಹಾಗಣಪತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭೇಟಿ ನೀಡಿದರು. ಇಂದ್ರೇಶ್, ಬಸವಣ್ಣ, ದೊರೆರಾಜು ಇತರರು ಇದ್ದರು.
ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನೂತನ ಅರಳಿ ಮರದ ಮಹಾಗಣಪತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭೇಟಿ ನೀಡಿದರು. ಇಂದ್ರೇಶ್, ಬಸವಣ್ಣ, ದೊರೆರಾಜು ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Maha Ganapati temple
ಕೊಳ್ಳೇಗಾಲ: ತಾಲೂಕಿನ ಮುಳ್ಳೂರು ಗ್ರಾಮದ ಹೆಬ್ಬಾಗಿಲಿನ ಸಮೀಪವಿರುವ ಅರಳಿ ಮರದ ಮಹಾಗಣಪತಿ ದೇವಾಲಯವು ಹೊಂಡರಬಾಳು ಮಠಾಧ್ಯಕ್ಷ ಶ್ರೀನೀಲಕಂಠಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಸೋಮವಾರ ಲೋಕಾರ್ಪಣೆಗೊಂಡಿತು.
ಭಾನುವಾರದಿಂದಲೇ ಮಹಾಗಣಪತಿ ಪ್ರತಿಷ್ಠಾಪನೆಯ ಹೋಮ, ಹವನ ಇತರ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ್ದು, ದೇವಾಲಯಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕರಾದ ಜಿ.ಎನ್.ನಂಜುಂಡಸ್ವಾಮಿ, ಎಸ್. ಬಾಲರಾಜು, ಜೆಡಿಎಸ್ ಕ್ಷೇತ್ರಾಧ್ಯಕ್ಷ ಬಿ.ಪುಟ್ಟಸ್ವಾಮಿ, ಚಾಮುಲ್ ಅಧ್ಯಕ್ಷ ಎಂ.ನಂಜುಂಡಸ್ವಾಮಿ, ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್, ಮಾಜಿ ಸದಸ್ಯ ಮುಳ್ಳೂರು ಕಮಲ್ ಸೇರಿದಂತೆ ಹಲವು ಗಣ್ಯರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕ್ಷೇತ್ರದಲ್ಲಿ ಮುಳ್ಳೂರು ದೊಡ್ಡ ಗ್ರಾಮವಾಗಿದ್ದು. ಸರ್ಕಾರ ಗ್ರಾಮದ ಅಭಿವೃದ್ಧಿಗೆ ಸುಮಾರು 3.50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಮುಳ್ಳೂರು ಗ್ರಾಮದ ನಾಡಗೌಡ ಇಂದ್ರೇಶ್, ಯಜಮಾನರಾದ ಬಸವಣ್ಣ, ದೊರೆರಾಜು, ನಾಗರಾಜೇಗೌಡ, ಸೋಮಶೇಖರ್, ಮಹೇಶ್, ಕೃಷ್ಣ ನಾಯಕ, ಮಹೇಶ್ ಮುಖಂಡರಾದ ರಾಜೇಶ್, ಮಹದೇವ ಸ್ವಾಮಿ, ಮಾದಪ್ಪ, ಸಿದ್ದಶೆಟ್ಟಿ, ಷಣ್ಮುಖ ಸ್ವಾಮಿ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಕಮಲಮ್ಮ, ಮಾಜಿ ಉಪಾಧ್ಯಕ್ಷ ಮಹೇಶ್ ವಿವಿಧ ಕೋಮಿನ ಎಲ್ಲ ಮುಖಂಡರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net