ಯಳಂದೂರು: ತಾಲೂಕಿನ ಕಂದಹಳ್ಳಿ ಗ್ರಾಮದಲ್ಲಿರುವ ಐತಿಹಾಸಿಕ ಶ್ರೀ ಮಹದೇಶ್ವರಸ್ವಾಮಿ ದೇಗುಲಕ್ಕೆ ಶುಕ್ರವಾರ ಅಮವಾಸ್ಯೆ ನಿಮಿತ್ತ ಸಾವಿರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು. .ಅಮವಾಸ್ಯೆ ನಿಮಿತ್ತ ಬೆಳಗ್ಗೆಯಿಂದಲೇ ಅಭಿಷೇಕ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. .ಭಕ್ತರಿಗೆ ದೇಗುಲದ ವತಿಯಿಂದ ಅನ್ನಸಂತರ್ಪಣೆ ಮಾಡಲಾಯಿತು.