ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರ ಮತ್ತು ಮಧುವನಹಳ್ಳಿ ಗ್ರಾಮ ಪಂಚಾಯಿತಿಯ ಹೊಂಡರಬಾಳುವಿನಲ್ಲಿ ನಡೆಯುತ್ತಿರುವ ಕೆರೆ ಹಾಗೂ ಕಾಲುವೆ ಹೂಳೆತ್ತುವ ಕಾಮಗಾರಿಯನ್ನು ಪರಿಶೀಲಿಸಿದ ಜಿ.ಪಂ ಸಿಇಒ ಮೋನಾ ರೋತ್
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸಲಹೆ
ಕೊಳ್ಳೇಗಾಲ ತಾಲೂಕಿಗೆ ಭೇಟಿ
ಚಾಮರಾಜನಗರ: ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್À ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯಡಿ ಕೊಳ್ಳೇಗಾಲ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಯ ಕ್ರಿಯಾ ಯೋಜನೆ ಅನುಮೋದನೆಗೊಂಡಿದ್ದು, ತಮ್ಮ ಗ್ರಾಮ ಪಂಚಾಯಿತಿಯಲ್ಲಿಯೇ ಕೂಲಿ ಕೆಲಸ ದೊರೆಯಲಿದ್ದು, ಎಲ್ಲರೂ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ತಿಳಿಸಿದರು.
ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರ ಮತ್ತು ಮಧುವನಹಳ್ಳಿ ಗ್ರಾಮ ಪಂಚಾಯಿತಿಯ ಹೊಂಡರಬಾಳುವಿನಲ್ಲಿ ನಡೆಯುತ್ತಿರುವ ಕೆರೆ ಹಾಗೂ ಕಾಲುವೆ ಹೂಳೆತ್ತುವ ಕಾಮಗಾರಿಯನ್ನು ಪರಿಶೀಲಿಸಿದ ಜಿ.ಪಂ ಸಿಇಒ ಮೋನಾ ರೋತ್ ಅವರು ವಿಬಿ ಜಿ ರಾಮ್ ಜಿ ಯೋಜನೆಯಡಿ ದೊರೆಯುವ ಉದ್ಯೋಗಾವಕಾಶ ಹಾಗೂ ಸೌಲಭ್ಯಗಳ ಕುರಿತು ಕೂಲಿ ಕಾರ್ಮಿಕರಿಗೆ ಮಾಹಿತಿ ನೀಡಿದರು. ಬಳಿಕ ಕಾಯಕ ಬಂಧುಗಳ ಜೊತೆ ಸಂವಾದ ನಡೆಸಿ, ಯೋಜನೆಯಡಿ ಕೈಗೊಳ್ಳಲಾಗುವ ವಿವಿಧ ಕಾಮಗಾರಿಗಳು, ಉದ್ಯೋಗದ ಅವಕಾಶಗಳು ಹಾಗೂ ಯೋಜನೆಯ ಪ್ರಯೋಜನಗಳ ಕುರಿತು ವಿವರಿಸಿದರು. ಕಡ್ಡಾಯ ಎನ್.ಎಂ.ಎಂ.ಎಸ್ ಹಾಜರಾತಿಗೆ ಸೂಚಿಸಿದರು.
ಜಿಲ್ಲೆಯಾದ್ಯಂತ ಸೆಪ್ಟೆಂಬರ್ 15ರ ವರೆಗೆ ಜಾಬ್ ಕಾರ್ಡ್ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಕೂಲಿಕಾರರು ಅಭಿಯಾನದಲ್ಲಿ ಭಾಗವಹಿಸಬೇಕು. ವಿಬಿ ಜಿ ರಾಮ್ ಜಿ ಯೋಜನೆಯಡಿ ಜಾಬ್ ಕಾರ್ಡ್ ಇಲ್ಲದವರು ಹೊಸ ಜಾಬ್ ಕಾರ್ಡ್ ಮಾಡಿಸಿಕೊಳ್ಳಬೇಕು. ಅಗತ್ಯವಿದ್ದರೆ ಜಾಬ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು. ಇ-ಕೆವೈಸಿ ನವೀಕರಣಕ್ಕೆ ಅವಕಾಶ ನೀಡಲಾಗಿದೆ ಎಂದರು.
ತಾಲ್ಲೂಕು ಐ.ಇ.ಸಿ ಸಂಯೋಜಕರು, ಬಿ.ಎಫ್.ಟಿ, ಕಾಯಕ ಬಂಧುಗಳು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಲ್ಲ ಕೂಲಿಕಾರರು ಸಹಕರಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಕೂಲಿ ಕೆಲಸಕ್ಕಾಗಿ ನಮೂನೆ 6 ನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿದರೆ ಯೋಜನೆಯಡಿ ಕೆಲಸ ಒದಗಿಸಲಾಗುವುದು ಎಂದು ಹೇಳಿದರು.
ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರಿಗೆ ಉದ್ಯೋಗ ಒದಗಿಸುವ ಮೂಲಕ ಜನರಿಗೆ ಆರ್ಥಿಕ ಹಾಗೂ ಜೀವನೋಪಾಯ ಭದ್ರತೆಯನ್ನು ಕಲ್ಪಿಸುವುದು, ಬರ ಪರಿಸ್ಥಿತಿ ಎದುರಿಸಲು ಜಲಸಂರಕ್ಷಣೆ, ಅಂತರ್ಜಲ ವೃದ್ದಿಸುವುದು, ದೀರ್ಘಕಾಲಿಕ ಜೀವನೋಪಾಯಕ್ಕೆ ನೆರವಾಗುವ ಕಾಮಗಾರಿಗಳಿಗೆ ಆದ್ಯತೆ ನೀಡಿ ಅನುμÁ್ಠನಗೊಳಿಸುವುದು ಮತ್ತು ಸ್ಥಳೀಯವಾಗಿ ಉದ್ಯೋಗ ಕಲ್ಪಿಸುವ ಮೂಲಕ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.
ನಂತರ ಹೊಂಡರಬಾಳುವಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣವಾಗಿರುವ ಶೌಚಾಲಯ ಮತ್ತು ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸಿದ್ದಯ್ಯನಪುರ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ತೆರಿಗೆ ವಸೂಲಾತಿ, ಓ.ಡಿ.ಎಫ್ ಪ್ಲಸ್ ತ್ವರಿತವಾಗಿ ಪ್ರಗತಿ ಮಾಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್, ಸಹಾಯಕ ನಿರ್ದೇಶಕರಾದ ಸಂದೇಶ ಬಿ.ಕೆ, ಮಧುವನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೋಭರಾಣಿ, ಸಿದ್ಧಯ್ಯನಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜುನೇದ್ ಅಹಮದ್, ವಿಬಿ ಜಿ ರಾಮ್ ಜಿ ಯೋಜನೆಯ ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.