ವಿಬಿ ಜಿ ರಾಮ್ ಜಿ ಯೋಜನೆ ಸದುಪಯೋಗ ಪಡಿಸಿಕೊಳ್ಳಿ

ಚಾಮರಾಜನಗರ ತಾಲ್ಲೂಕಿನ ಸಂತೇಮರಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾವುದವಾಡಿ ಗ್ರಾಮದ ದೇವಯ್ಯನ ಕಟ್ಟೆ ಅಭಿವೃದ್ಧಿ ಕಾಮಗಾರಿ ಹಾಗೂ ಉಮ್ಮತ್ತೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಉಮ್ಮತ್ತೂರು ಗ್ರಾಮದ ಸಿದ್ದಕಟ್ಟೆಯಿಂದ ದಕ್ಷಿಣದ ಕಡೆಗೆ ಕಾಲುವೆ ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರ್ಮಿಕರೊಂದಿಗೆ ಚರ್ಚಿಸಿದರು.

Published on

ಪ್ರಮುಖ ಮುಖ್ಯಾಂಶಗಳು

  • ಜಿ.ಪಂ ಸಿ.ಇ.ಓ ಮೋನಾ ರೋತ್ ಸಲಹೆ
  • ಕಾಮಗಾರಿ ಸ್ಥಳಕ್ಕೆ ಭೇಟಿ
ಚಾಮರಾಜನಗರ; ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ ಗಾರ್ ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯು ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆ ಹಾಗೂ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸಹಕಾರಿಯಾಗಿದೆ. ಸಮುದಾಯದ ಸಹಯೋಗದೊಂದಿಗೆ ಗ್ರಾಮಗಳ ಸವಾರ್ಂಗೀಣ ಅಭಿವೃದ್ಧಿಗೆ ಮುಕ್ತ ಅವಕಾಶ ಕಲ್ಪಿಸುವ ಈ ಯೋಜನೆಯನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ತಿಳಿಸಿದರು.
ಚಾಮರಾಜನಗರ ತಾಲ್ಲೂಕಿನ ಸಂತೇಮರಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾವುದವಾಡಿ ಗ್ರಾಮದ ದೇವಯ್ಯನ ಕಟ್ಟೆ ಅಭಿವೃದ್ಧಿ ಕಾಮಗಾರಿ ಹಾಗೂ ಉಮ್ಮತ್ತೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಉಮ್ಮತ್ತೂರು ಗ್ರಾಮದ ಸಿದ್ದಕಟ್ಟೆಯಿಂದ ದಕ್ಷಿಣದ ಕಡೆಗೆ ಕಾಲುವೆ ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರ್ಮಿಕರೊಂದಿಗೆ ಚರ್ಚಿಸಿದರು.
ವಿಬಿ ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ನೊಂದಾಯಿತ ಕುಟುಂಬಕ್ಕೆ 125 ದಿನಗಳ ಉದ್ಯೋಗ ಪಡೆಯಲು ಅವಕಾಶವಿದ್ದು, ಗ್ರಾಮದ ಜನರು ಉದ್ಯೋಗ ಪಡೆದು ಸ್ವಾವಲಂಬಿಯಾಗಬೇಕು. ಯೋಜನೆಯಡಿ ದಿನದ ಕೂಲಿ ಮೊತ್ತ 382 ರೂ.ಗಳಾಗಿದ್ದು ಪುರುಷ ಮತ್ತು ಮಹಿಳೆಯರಿಗೆ ಸಮಾನ ವೇತನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸೆಪ್ಟೆಂಬರ್ 15 ರವರೆಗೆ ಜಾಬ್ ಕಾರ್ಡ್ ಮೇಳ ಪ್ರಾರಂಭವಾಗಿದ್ದು, ಉದ್ಯೋಗ ಚೀಟಿ ಹೊಂದಿಲ್ಲದ ಕುಟುಂಬಗಳನ್ನು ಗುರುತಿಸಿ ನಮೂನೆ-1 ರಲ್ಲಿ ಬೇಡಿಕೆ ಪಡೆದು ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಿಸಲು ಹಾಗೂ ನಮೂನೆ 6ರಲ್ಲಿ ಉದ್ಯೋಗ ಬೇಡಿಕೆ ಸಂಗ್ರಹಿಸಿ ಆದ್ಯತೆ ಮೇರೆಗೆ ಗ್ರಾಮೀಣ ಜನರಿಗೆ ಉದ್ಯೋಗ ನೀಡಲು ಕ್ರಮವಹಿಸಲಾಗುತ್ತಿದೆ ಎಂದರು.
ದುರ್ಬಲ ವರ್ಗದ ಕುಟುಂಬಗಳಿಗೆ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು ಈಗಾಗಲೇ ಎಲ್ಲಾ ಗ್ರಾಮ ಪಂಚಾಯಿತಿಗಳ ಕ್ರಿಯಾಯೋಜನೆಗೆÉ ಅನುಮೋದನೆ ನೀಡಲಾಗಿದ್ದು ನಿಯಮಾನುಸಾರ ಸೌಲಭ್ಯ ಪಡೆಯಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಹೇಳಿದರು.
ಇದೇ ವೇಳೆ ಉಮ್ಮತ್ತೂರು ಗ್ರಾಮದ ಕಾರ್ಮಿಕರು ಜಿ.ಪಂ ಸಿ.ಇ.ಓ ಅವರನ್ನು ಅಭಿನಂದಿಸಿ ನಿರಂತರ ಉದ್ಯೋಗ ಹಾಗೂ ಸಕಾಲದಲ್ಲಿ ಕೂಲಿ ಪಾವತಿಸಲು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ಗಿರಿಧರ್, ಸಹಾಯಕ ನಿರ್ದೇಶಕರಾದ ಪ್ರಕಾಶ್ ಕುಮಾರ್, ಪಂಚಾಯತಿ ಅಭಿವೃದ್ದಿ ಅಧಿಕಾರಿ ಮಮತಾ, ಮಹದೇವಪ್ರಭು, ಜಿಲ್ಲಾ ಸಂಯೋಜಕರಾದ ನವೀನ್, ತಾಲ್ಲೂಕು ಸಂಯೋಜಕರಾದ ಯತೀಶ್, ಇತರರು ಇದೇ ಸಂದರ್ಭದಲ್ಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net