ನರೇಗಾ ಯೋಜನೆ ಮುಂದುವರಿಸಲು ಒತ್ತಾಯಿಸಿ ಪಾದಯಾತ್ರೆ

 ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಗಣೇಶ ಪ್ರಸಾದ್ ಮಾತನಾಡಿದರು. ನಂಜಪ್ಪ, ಮರಿಸ್ವಾಮಿ, ಮಹೇಶ್, ನಂಜುಂಡಪ್ರಸಾದ್ ಇದ್ದರು.
ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಗಣೇಶ ಪ್ರಸಾದ್ ಮಾತನಾಡಿದರು. ನಂಜಪ್ಪ, ಮರಿಸ್ವಾಮಿ, ಮಹೇಶ್, ನಂಜುಂಡಪ್ರಸಾದ್ ಇದ್ದರು.
Published on
ಗುಂಡ್ಲುಪೇಟೆ: ಕೇಂದ್ರದ ಕಾಂಗ್ರೆಸ್ ಸರ್ಕಾರ ಬಡವರ ಅನುಕೂಲಕ್ಕೆ ಜಾರಿಗೆ ತಂದಿದ್ದ ನರೇಗಾ ರದ್ದುಪಡಿಸಿ, ಅದರ ಬದಲಿಗೆ ಬಿಜೆಪಿ ಸರ್ಕಾರ ರೂಪಿಸಿರುವ ’ವಿಬಿ ಜಿ ರಾಮ್ ಜಿ’ ಯೋಜನೆಯನ್ನು 2026-27ನೇ ಸಾಲಿನಿಂದ ಜಾರಿಗೊಳಿಸಲು ಮುಂದಾಗಿರುವುದು ಖಂಡನೀಯ ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಹೊರವಲಯದಲ್ಲಿರುವ ಬಸವೇಶ್ವರ ಕಮ್ಯುನಿಟಿ ಹಾಲ್‌ನಿಂದ ಕಾಂಗ್ರೆಸ್ ಕಾರ್ಯಕರ್ತರ ಜತೆ ಪಾದಯಾತ್ರೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ಅವರು ಮಾತನಾಡಿದರು.
ಕೆಂದ್ರ ಸರ್ಕಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಜನರಿಗೆ ಉದ್ಯೋಗ ಸೃಷ್ಟಿಸಿ ಕಾಂಪೌಂಡ್, ಕೆರೆ, ಕಾಲುವೆ,ಅಭಿವೃದ್ಧಿಗೆ ಪುರಕವಾದ ನರೇಗಾವನ್ನು ತಿದ್ದುಪಡಿ ಮಾಡಿ ಮಹಾತ್ಮಗಾಂಧಿಗೆ ಅವಮಾನ ಮಾಡುವುದರ ಜತೆಗೆ ಗ್ರಾಮೀಣ ಮಟ್ಟದ ಜನರಿಗೆ ಅನುಕೂಲವಾಗಿದ್ದ ಯೋಜನೆ ಕಿತ್ತು ಅನ್ಯಾಯ ಮಾಡಲು ಹೊರಟಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಹೋರಾಟ ಮುಂದುವರಿಯಲಿದೆ ಎಂದರು.
ನರೇಗಾ ಮುಂದುವರಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಗಳಾದ ಸುದರ್ಶನ್, ಎಸ್.ಸಿ.ಬಸವರಾಜು, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಧುಸೂದನ್, ಮಾಜಿ ಕಾಡಾ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ.ರಾಜಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ಮಡಿವಾಳಪ್ಪ, ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net