ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಸಭೆ

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಕೈಗೊಳ್ಳಲಾಗಿರುವ ಪ್ರಕ್ರಿಯೆ ಕುರಿತು ಚರ್ಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಕೈಗೊಳ್ಳಲಾಗಿರುವ ಪ್ರಕ್ರಿಯೆ ಕುರಿತು ಚರ್ಚಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಕ್ರಿಯೆ ಪರಿಶೀಲನೆ
  • ಮತದಾರರ ಪಟ್ಟಿ ವೀಕ್ಷಕರಾದ ಆರ್. ವಿನೋತ್ ಪ್ರಿಯ ಅವರ ಅಧ್ಯಕ್ಷತೆ
ಚಾಮರಾಜನಗರ: ಮತದಾರರ ಪಟ್ಟಿ ವೀಕ್ಷಕರು ಹಾಗೂ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಆರ್. ವಿನೋತ್ ಪ್ರಿಯ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ನೋಂದಾಯಿತ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಕೈಗೊಳ್ಳಲಾಗಿರುವ ಪ್ರಕ್ರಿಯೆ ಕುರಿತು ಚರ್ಚಿಸಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪೂರ್ವದಲ್ಲಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿದ್ದ ಮತದಾರರ ವಿವರ, ಮತದಾರರಿಗೆ ವಿತರಿಸಲಾಗಿದ್ದ ಗಣತಿ ನಮೂನೆ, ಭರ್ತಿ ಮಾಡಿರುವ ಗಣತಿ ನಮೂನೆಗಳ ಸ್ವೀಕಾರ, ಗಣಕೀಕರಣ ವಿವರಗಳನ್ನು ಪರಿಶೀಲಿಸಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಯಲ್ಲಿನ ಮತದಾರರ ವಿವರ ಹಾಗೂ ಪಟ್ಟಿ ಪ್ರಕಟಣೆ ನಂತರ ಕೈಗೊಳ್ಳಲಾಗಿರುವ ಪ್ರಕ್ರಿಯೆಗಳ ಕುರಿತು ಪರಾಮರ್ಶಿಸಿದರು.
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಒಟ್ಟು 983 ಮತಗಟ್ಟೆಗಳ ಪೈಕಿ 1200ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪುನರ್ ವಿಂಗಡಣೆ ನಡೆಸಿ, ಮತದಾರರನ್ನು ವಿಂಗಡಿಸಿ ಹೊಸದಾಗಿ 47 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಿಂದ 1030 ಒಟ್ಟು ಮತಗಟ್ಟೆಗಳಿವೆ ಎಂದು ಮತದಾರರ ಪಟ್ಟಿ ವೀಕ್ಷಕರು ತಿಳಿಸಿದರು.
ಕರಡು ಮತದಾರರ ಪಟ್ಟಿ ಸಂಬಂಧ ಹಕ್ಕು ಆಕ್ಷೇಪಣೆಗಳನ್ನು ಆಗಸ್ಟ್ 24 ರಿಂದ ಸೆಪ್ಟೆಂಬರ್ 23ರವರೆಗೆ ಸಲ್ಲಿಸಲು ಅವಕಾಶವಿದೆ. ಈ ಅವಧಿಯಲ್ಲಿ ಸ್ವೀಕೃತವಾಗುವ ಹಕ್ಕು ಆಕ್ಷೇಪನೆಗಳನ್ನು ಆಗಸ್ಟ್ 24 ರಿಂದ ಅಕ್ಟೋಬರ್ 22ರವರೆಗೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿಗಳು ಇತ್ಯರ್ಥಪಡಿಸಲಿದ್ದಾರೆ ಎಂದರು.
ಅರ್ಹ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಕೈಬಿಟ್ಟು ಹೋಗಿದ್ದರೆ ಸಂಬಂಧಿಸಿದ ಮತದಾರರು ನಮೂನೆ 6ರ ಅರ್ಜಿಯ ಜೊತೆ ಘೋಷಣಾ ಪತ್ರ ಹಾಗೂ ಅಗತ್ಯ ದಾಖಲೆಗಳನ್ನು ನೀಡಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅವಕಾಶವಿರುತ್ತದೆ ಎಂದು ಮತದಾರರ ಪಟ್ಟಿ ವೀಕ್ಷಕರಾದ ಆರ್. ವಿನೋತ್ ಪ್ರಿಯ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎನ್. ನಾಗಯ್ಯ, ಎ.ಹೆಚ್. ನಸ್ರುಲ್ಲಾ ಖಾನ್, ಶಂಕುತಲಾ, ಹೆಚ್.ಎಸ್. ತೋಂಟಧಾರ್ಯಸ್ವಾಮಿ, ಎಸ್. ಶಿವರುದ್ರಸ್ವಾಮಿ, ಮತದಾರರ ನೋಂದಣಾಧಿಕಾರಿಗಳಾದ ಡಾ. ಆರ್. ವಸುಂಧರ ಹೆಗಡೆ, ಎನ್. ವಿಶ್ವನಾಥ್, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ತಹಶೀಲ್ದಾರರಾದ ಐ.ಇ. ಬಸವರಾಜು, ಕೆ.ಎನ್. ಚೈತ್ರ, ಎಸ್.ಎನ್ ನಯನ, ಬಿ. ಗಿರಿಜ, ತನ್ಮಯ್, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net