ಮಸಣಾಪುರ ಗ್ರಾಮಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಇತ್ತೀಚೆಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದರು. ಈ ವೇಳೆ ಕ್ರೀಡಾ ಸಾಮಗ್ರಿ ಖರೀದಿಸಲು ನೆರವು ನೀಡುವಂತೆ ಗ್ರಾಮದ ಕ್ರೀಡಾಪಟುಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಾಲಿಬಾಲ್, ಶೆಟಲ್ ಕಾಕ್, ಬ್ಯಾಟ್ ಒಳಗೊಂಡ ಕ್ರೀಡಾಕಿಟ್ ಅನ್ನು ಉಚಿತವಾಗಿ ನೀಡುವ ಭರವಸೆ ನೀಡಿದ್ದರು. ಗುರುವಾರ ಕ್ರೀಡಾಪಟುಗಳಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಮಸಣಾಪುರ ವಿಜಯ್ ಮೂಲಕ ಕ್ರೀಡಾ ಸಾಮಗ್ರಿಗಳನ್ನು ನೀಡಿದರು.