ನೀರಾವರಿ ಯೋಜನೆಗೆ 350 ಕೋಟಿ ರೂ. ಪ್ರಸ್ತಾವನೆ

ಯಳಂದೂರು ತಾಲೂಕಿನ ಮದ್ದೂರು ಗ್ರಾಮದಲ್ಲಿ ಶನಿವಾರ  ಸೇತುವೆ ನಿರ್ಮಾಣ ಕಾಮಗಾರಿ ಕಾರ್ಯಕ್ರಮವನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಉದ್ಘಾಟಿಸಿದರು. ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್  ಕೆ. ಮಹೇಶ್ ಮಾತನಾಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಇಒ ಎ.ಬಿ. ವೇಣು, ಸಿಪಿಐ ಸುಬ್ರಹ್ಮಣ್ಯ ಇತರರು ಹಾಜರಿದ್ದರು.
ಯಳಂದೂರು ತಾಲೂಕಿನ ಮದ್ದೂರು ಗ್ರಾಮದಲ್ಲಿ ಶನಿವಾರ ಸೇತುವೆ ನಿರ್ಮಾಣ ಕಾಮಗಾರಿ ಕಾರ್ಯಕ್ರಮವನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಉದ್ಘಾಟಿಸಿದರು. ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಕೆ. ಮಹೇಶ್ ಮಾತನಾಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಇಒ ಎ.ಬಿ. ವೇಣು, ಸಿಪಿಐ ಸುಬ್ರಹ್ಮಣ್ಯ ಇತರರು ಹಾಜರಿದ್ದರು.
Published on
* ಸೇತುವೆ ಕಾಮಗಾರಿಗೆ ಭೂಮಿಪೂಜೆ
ಯಳಂದೂರು : ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ 350 ಕೋಟ ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.
ಅವರು ಶನಿವಾರ ತಾಲೂಕಿನ ಮದ್ದೂರು ಗ್ರಾಮದ ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸಲು (ಕಾವೇರಿ ನೀರಾವರಿ ನಿಗಮದ ಸುವರ್ಣಾವತಿ ನದಿಗೆ ಅಡ್ಡಲಾಗಿ ನಿರ್ಮಾಣಗೊಳ್ಳುತ್ತಿರುವ ) ಸೇತುವೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಲು ಈಗ ಕಾಲ ಕೂಡಿಬಂದಿದೆ.
ಇದರೊಂದಿಗೆ ಈ ಭಾಗದ ಜನರು ಸಂಪರ್ಕ ರಸ್ತೆಯನ್ನೂ ನಿರ್ಮಿಸಲು ಕೇಳಿದ್ದಾರೆ. ಅದನ್ನು ಕೂಡ
ಇದೇ ಯೋಜನೆಗೆ ಸೇರಿಸಿಕೊಳ್ಳುವಂತೆ ಇಲಾಖೆಯ ಸಿಇಗೆ ಸೂಚನೆ ನೀಡುವುದಾಗಿ
ಹೇಳಿದರು. ಕಣ್ಣೇಗಾಲ ಪಿಕಪ್‌ನಿಂದ 19 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಮೊದಲಿಗೆ 6 ಕೆರೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕಾಮಗಾರಿ 70 ಕೋಟಿ ರೂ. ವೆಚ್ಚದಲ್ಲಿ ನಡೆಯಲಿದೆ. ಇದರೊಂದಿಗೆ ಗುಂಡಾಲ್ ಸೀರೀಸ್ ಕಾಲುವೆ ದುರಸ್ತಿ ಕೆರೆಗಳ ನೀರು ತುಂಬಿಸುವ ಯೋಜನೆಗೂ 60 ಕೋಟಿ ರೂ. ಹಣ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.
ಅಭಿವೃದ್ಧಿಗೆ ಆದ್ಯತೆ:
ನನ್ನ ಅವಧಿಯಲ್ಲಿ ಇದುವರೆಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ವಿವಿಧ ಸಮುದಾಯಗಳ ಸಮುದಾಯ ಭವನಗಳ ಪೂರ್ಣಗೊಳಿಸಲು 75 ಕೋಟಿ ರೂ. ಹಣ ವ್ಯಯಿಸಲಾಗಿದೆ. ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಹಿರೀಕರೆ ಅಭಿವೃದ್ಧಿಗೆ 14.5 ಕೋಟಿ ರೂ. ಬಿಡುಗಡೆಯಾಗಿದೆ. ಹಳೆ ಹಂಪಾಪುರದಲ್ಲಿ ಸಿಲ್ಕ್ ಪಾರ್ಕ್ ನಿರ್ಮಾಣಕ್ಕೆ 13 ಎಕರೆ ಜಮೀನನ್ನು ಗುರುತಿಸಲಾಗಿದೆ. ಜವಳಿ ಪಾರ್ಕ್ ನಿರ್ಮಾಣಕ್ಕೆ ಹಳೇಹಂಪಾಪುರ, ಹೊಸ ಹಂಪಾಪುರದ ನಡುವೆ 15 ಎಕರೆ ಜಮೀನನ್ನು ಗುರುತಿಸಲಾಗಿದೆ. ಸಂತೆಮರಹಳ್ಳಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಡಿಪೋ ನಿರ್ಮಿಸಲು ಜಾಗ ಗುರುತಿಸಲಾಗಿದ್ದು, ಸರ್ಕಾರಕ್ಕೆ ಈ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.
ಕೊಳ್ಳೇಗಾಲದಲ್ಲಿ ನೂತನ ಆಸ್ಪತ್ರೆ ನಿರ್ಮಾಣಕ್ಕೆ 48 ಕೋಟಿ ರೂ. ಬಿಡುಗಡೆಯಾಗಿದೆ. ಶೀಘ್ರದಲ್ಲೇ ಮುಖ್ಯಮಂತ್ರಿಯವರಿಂದ ಕಾಮಗಾರಿಗೆ ಚಾಲನೆ ದೊರಕಲಿದೆ ಎಂದು ಮಾಹಿತಿ ನೀಡಿದರು.
ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಕೆ. ಮಹೇಶ್ ಮಾತನಾಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ತಾಲೂಕು ಅಧ್ಯಕ್ಷ ಕಿನಕಹಳ್ಳಿ ಪ್ರಭುಪ್ರಸಾದ್, ಇಒ ಎ.ಬಿ. ವೇಣು, ಸಿಪಿಐ ಸುಬ್ರಹ್ಮಣ್ಯ, ಕಾವೇರಿ ನೀರಾವತಿ ನಿಗಮದ ಅಧೀಕ್ಷಕ ಎಂಜಿನಿಯರ್ ರಘುಪತಿ, ಕಾರ್ಯಪಾಲಕ ಇಂಜಿನಿಯರ್ ಉಮೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net