ಮಣ್ಣಿನ ಫಲವತ್ತತೆ ಹೆಚ್ಚಿಸಲು ಯೋಜನೆ ಜಾರಿ

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಸಮೀಪ ಕೃಷಿ ಇಲಾಖೆ ಆಯೋಜಿಸಿದ್ದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಜಲಾನಯನ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿದರು. ಸುಷ್ಮಾ, ಶಶಿಧರ್, ಕಿರಣ್ ಕುಮಾರ್, ಜಿ.ಕೆ.ಲೋಕೇಶ್, ಕೆ.ಎಸ್.ಮಹೇಶ್ ಇದ್ದರು.
ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಸಮೀಪ ಕೃಷಿ ಇಲಾಖೆ ಆಯೋಜಿಸಿದ್ದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಜಲಾನಯನ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿದರು. ಸುಷ್ಮಾ, ಶಶಿಧರ್, ಕಿರಣ್ ಕುಮಾರ್, ಜಿ.ಕೆ.ಲೋಕೇಶ್, ಕೆ.ಎಸ್.ಮಹೇಶ್ ಇದ್ದರು.
Published on
ಗುಂಡ್ಲುಪೇಟೆ: ಮಳೆ ನೀರಿನಿಂದಾಗುವ ಮಣ್ಣಿನ ಸವಕಳಿ ತಪ್ಪಿಸಲು ಹಾಗೂ ಫಲವತ್ತತೆ ಹೆಚ್ಚಿಸಲು ಕೃಷಿ ಇಲಾಖೆ ಯೋಜನೆ ರೂಪಿಸಿದ್ದು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ತಾಲೂಕಿನ ಭೀಮನಬೀಡು ಸಮೀಪ ಸೋಮವಾರ ಕೃಷಿ ಇಲಾಖೆ ಆಯೋಜಿಸಿದ್ದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಜಲಾನಯನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಐಸಿಐಸಿಐ ಬ್ಯಾಂಕ್ ತಾಲೂಕಿನ ಕಾಡಂಚಿನ ಗ್ರಾಮಗಳ ಶಾಲಾ ವಿದ್ಯಾರ್ಥಿಗಳಿಗೆ ನಾನಾ ರೀತಿಯಲ್ಲಿ ನೆರವಾಗುತ್ತಿದೆ. ಗುಂಡ್ಲುಪೇಟೆ ಬರಪೀಡಿತ ಹಾಗೂ ಅಂತರ್ಜಲ ಸಮಸ್ಯೆ ಎದುರಿಸುತ್ತಿದ್ದು ನೀರಿನ ಮಿತಬಳಕೆ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ನೀರಿನ ಮಹತ್ವದ ಬಗ್ಗೆ ಹೆಚ್ಚಿನ ಗಮನಹರಿಸಬೇಕಾಗಿದೆ. ಕೃಷಿ ಇಲಾಖೆ ನೀರಿನ ಮಿತಬಳಕೆಗೆ ಅಗತ್ಯವಾದ ಎಲ್ಲ ನೆರವು ನೀಡುತ್ತಿದ್ದು, ಇದರ ಅನುಕೂಲಗಳನ್ನು ಪಡೆದುಕೊಳ್ಳಬೇಕು. ನೀರಿನ ಕೊರತೆಯಿರುವ ಪ್ರದೇಶಗಳ ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಕೃಷಿ ಇಲಾಖೆ ಉಪನಿರ್ದೇಶಕಿ ಸುಷ್ಮಾ ಮಾತನಾಡಿ, ಕಣ್ಣೇಗಾಲ, ಕೂತನೂರು ಹಾಗೂ ಭೀಮನಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳೆಯಾಶ್ರಿತ ಜಮೀನಿನಲ್ಲಿ ಅರಣ್ಯ ಹಾಗೂ ತೋಟಗಾರಿಕೆ ಸಸಿ ವಿತರಣೆ, ಮಳೆ ನೀರು ಶೇಖರಣೆಗೆ ಕಂದಕ ಬದು ನಿರ್ಮಾಣ, ಸೆಣಬು, ತರಕಾರಿ ಕಿಟ್, ಮೇವಿನ ಜೋಳ, ಸ್ವಸಹಾಯ ಸಂಘಗಳಿಗೆ ಸುತ್ತುನಿಧಿ, ಕೌಶಲಾಭಿವೃದ್ಧಿ ತರಬೇತಿ ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ರೈತರಿಗೆ ಕೃಷಿ ಪರಿಕರಗಳನ್ನು ವಿತರಣೆ ಮಾಡಲಾಯಿತು. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಶಿಧರ್, ಕೃಷಿ ಅಧಿಕಾರಿ ಕಿರಣ್‌ಕುಮಾರ್, ಭೂನ್ಯಾಯ ಮಂಡಳಿ ಸದಸ್ಯ ಜಿ.ಕೆ.ಲೋಕೇಶ್, ಜಿಪಂ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಹಾಪ್‌ಕಾಮ್ಸ್ ನಿರ್ದೇಶಕ ನೀಲಕಂಠಪ್ಪ, ಪುರಸಭೆ ಮಾಜಿ ಸದಸ್ಯ ರಾಜಗೋಪಾಲ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net