ಇದಕ್ಕೆ ಪ್ರತಿಕ್ರಿಯಿಸಿದ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಗೌಡಹಳ್ಳಿ ಗ್ರಾಮದ ಬಳಿ ಹರಿಯುವ ದೊಡ್ಡ ಹಳ್ಳದಲ್ಲಿ ಚೆಕ್‌ಡ್ಯಾಂ ಹಾಗೂ ಹೆಗ್ಗವಾಡಿ ಗ್ರಾಮದ ಬಳಿ ಹರಿಯುವ ಹೆಬ್ಬಳ್ಳ ದಲ್ಲಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗಳನ್ನು ವಿಶೇಷ ಘಟಕ ಯೋಜನೆಯಡಿ ಕೈಗೆತ್ತಿ ಕೊಳ್ಳಲು ಅನುಮೋದನೆ ನೀಡಲಾಗಿದೆ ಎಂದು ವಿವರ ನೀಡಿದರು.