ಯಳಂದೂರು ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಮೊಬೈಲ್ ಬಿಡಿ, ಪುಸ್ತಕ ಹಿಡಿ ಕಾರ್ಯಕ್ರಮದಲ್ಲಿ ಜಿಲ್ಲಾ ಕಸಾಪ ವತಿಯಿಂದ ಶಾಲೆಗೆ ಪುಸ್ತಕಗಳನ್ನು ನೀಡಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್, ಕಸಾಪ ಜಿಲ್ಲಾಧ್ಯಕ್ಷ ಎಂ. ಶೈಲಕುಮಾರ್, ಉಪಪ್ರಾಂಶುಪಾಲ ನಂಜುಂಡಯ್ಯ ಇತರರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಬೇಸರ
ಸಂವಾದ ಕಾರ್ಯಕ್ರಮ
ಯಳಂದೂರು: ಮೊಬೈಲ್ ಬಳಕೆ ಒಂದು ಜಾಗತಿಕ ಸಮಸ್ಯೆಯಾಗಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ಶಿಕ್ಷಣದ ಕಡೆ ಗಮನ ಹರಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಸಲಹೆ ನೀಡಿದರು.
ಯಳಂದೂರಿನ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಪಬ್ಲಿಕ್ ಶಾಲೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಜಿಲ್ಲಾ ಕಸಾಪ ವತಿಯಿಂದ ಆಯೋಜಿಸಿದ್ದ ಮೊಬೈಲ್ ಬಿಡಿ ಪುಸ್ತಕ ಹಿಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೊಬೈಲ್ ಗೀಳು ಜಗತ್ತನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಇದು ವಿದ್ಯಾರ್ಥಿಗಳ ಓದಿಗೆ ಮಾರಕವಾಗಿದೆ. ಕೋವಿಡ್‌ನಲ್ಲಿ ಇದರ ಸದ್ಭಳಕೆಗಿಂತ ದುರ್ಬಳಕೆಯೇ ಹೆಚ್ಚಾಗುತ್ತಿದೆ. ಈ ಬಗ್ಗೆ ಅನೇಕ ಜಾಗೃತಿಗಳು ನಡೆಯುತ್ತಿದ್ದರೂ, ಮೊಬೈಲ್ ಬಳಕೆಯಿಂದ ಹೊರ ಬರಲು ಸಾಧ್ಯವಾಗದ ಪರಿಸ್ಥಿತಿ ಇದೆ. ಇದು ದೇಹ ಹಾಗೂ ಮನಸ್ಸಿನ ಆರೋಗ್ಯಕ್ಕೆ ಮಾರಕವಾಗುತ್ತದೆ. ವಿದ್ಯಾರ್ಥಿಗಳು ಸಾಧ್ಯವಾದಷ್ಟು ದೂರವಿರಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ ಮಾತನಾಡಿ, ಮಕ್ಕಳಲ್ಲಿ ಮೊಬೈಲ್ ಬಳಕೆಯಿಂದ ಮಾನಸಿಕ ಖಿನ್ನತೆ ಸಮಸ್ಯೆ ಹೆಚ್ಚಾಗುತ್ತಿದೆ. ಅಲ್ಲದೆ ಜಾಗತಿಕವಾಗಿ ಮೊಬೈಲ್ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ. ಹದಿಹರೆಯದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುವ ಮಟ್ಟಕ್ಕೆ ಇದರ ದಾಸರಾಗಿರುವುದು ಆತಂಕಕಾರಿ ವಿಚಾರವಾಗಿದೆ. ನಮ್ಮ ದೇಶದಲ್ಲೂ ಈ ಇಂತಹ ಕೃತ್ಯಗಳು ಹೆಚ್ಚುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಮೊಬೈಲ್ ಬಳಕೆಯಿಂದಾಗುವ ಲಾಭ, ನಷ್ಟಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕಸಾಪ ಜಿಲ್ಲಾಧ್ಯಕ್ಷ ಎಂ. ಶೈಲಕುಮಾರ್ ಶಾಲೆಗೆ ಪುಸ್ತಕಗಳನ್ನು ವಿತರಣೆ ಮಾಡಿ, ಮಕ್ಕಳಿಗೆ ಪುಸ್ತಕ ಓದುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಎಚ್. ಶ್ರೀಧರ್ ಮೊಬೈಲ್‌ನಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಎಸ್‌ಡಿಎಂಸಿ ಅಧ್ಯಕ್ಷ ಜೈಗುರು, ಕಸಾಪ ತಾಲೂಕು ಅಧ್ಯಕ್ಷ ಯರಿಯೂರು ನಾಗೇಂದ್ರ, ಮೋಹನ್ ಕಲ್ಕುಣಿ ಇತರರು ಇದ್ದರು.