ಇದೇ ವೇಳೆ ಶಕ್ತಿ ಯೋಜನೆ, ಗೃಹಜ್ಯೋತಿ ಹಾಗೂ ಯುವನಿಧಿಯ ಬಗ್ಗೆ ಚರ್ಚಿಸಲಾಯಿತು. ಅನುಪಾಲನಾ ವರದಿಯನ್ನು ಪಡೆದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಸಾರಿಗೆ ಡಿಪೋ ವ್ಯವಸ್ಥಾಪಕ ಭೋಗನಾಯಕ, ಸೆಸ್ಕ್ ಎಇಇ ರಂಗಸ್ವಾಮಿ, ಉದ್ಯೋಗ ವಿನಿಮಯ ಕಚೇರಿಯ ಯಶವಂತ್, ಗ್ಯಾರಂಟಿ ಸಮಿತಿ ಸದಸ್ಯರಾದ ಸೋಮಶೇಖರ್, ಮುಷೀರ್ ಆಹಮದ್, ಗೋವಿಂದ, ಸಿದ್ದಪ್ಪಾಜಿ, ನಾಗೇಶ್ ಹಾಗೂ ಇನ್ನಿತರರು ಇದ್ದರು.